Karnataka Rain: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಚದುರಿದ ಮಳೆ; ಮಲೆನಾಡಿಗೆ ಇಂದು ಹಳದಿ ಅಲರ್ಟ್ ಘೋಷಣೆ

Bengaluru Weather Today: ಇಂದು (ಭಾನುವಾರ) ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ.

Karnataka Rain: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಚದುರಿದ ಮಳೆ; ಮಲೆನಾಡಿಗೆ ಇಂದು ಹಳದಿ ಅಲರ್ಟ್ ಘೋಷಣೆ
ಮಳೆImage Credit source: Weather.com
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 13, 2022 | 6:12 AM

ಬೆಂಗಳೂರು: ಶನಿವಾರ ಮುಂಜಾನೆಯಿಂದ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಇನ್ನೊಂದೆಡೆ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯೂ ಹೆಚ್ಚಾಗಿದೆ. ಚಳಿಯಿಂದಾಗಿ ಬೆಂಗಳೂರು ಹಿಲ್​ ಸ್ಟೇಷನ್​ನಂತಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bangalore Rains) ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 15ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಭಾನುವಾರ) ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Bengaluru Weather: ಎಂಥಾ ಚಳಿ ಮಾರಾಯ್ರೆ!; ಮಳೆ, ಚಳಿಯಿಂದ ಊಟಿಯಂತಾದ ಬೆಂಗಳೂರು

ಇಂದು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ಕರಾವಳಿ ಕರ್ನಾಟಕದಲ್ಲಿ ಚದುರಿದ ಮಳೆ ಸುರಿಯಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ಲಕ್ಷದ್ವೀಪ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಉತ್ತರ ಒಳನಾಡಿನಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಸುರಿಯುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದು ಆರೆಂಜ್ ಅಲರ್ಟ್‌ ನೀಡಲಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ