Karnataka Rain: ಬೆಂಗಳೂರು, ಕರಾವಳಿ, ಕೊಡಗು, ಮಲೆನಾಡಿನಲ್ಲಿ ಇಂದಿನಿಂದ ಸೆ. 6ರವರೆಗೆ ಮಳೆ; ಹಳದಿ ಅಲರ್ಟ್ ಘೋಷಣೆ
Bengaluru Rain: ಇಂದು ಬೆಂಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Bangalore Rains: ಬೆಂಗಳೂರು: ಬೆಂಗಳೂರಿನಲ್ಲಿ (Bengaluru Rains) ಇಂದೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನ (Bangalore Rain) ಬಹುತೇಕ ಏರಿಯಾಗಳು ಕೆರೆಯಂತಾಗಿವೆ, ರಸ್ತೆಗಳೆಲ್ಲ ನದಿಯಂತಾಗಿವೆ. ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು (Kodagu Rain) ಜಿಲ್ಲೆಗಳಲ್ಲಿ ಇಂದಿನಿಂದ ಸೆ. 6ರವರೆಗೆ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮಂಗಳವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ.
ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ
ಇಂದು ಮಲೆನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗೆ ಹಳದಿ ಅಲರ್ಟ್ ನೀಡಲಾಗಿದೆ. ಭಾನುವಾರದಿಂದ ಸೋಮವಾರ ಬೆಳಗ್ಗೆ 8.30ರವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಅಪ್ಪಳಿಸಲಿದೆ.
ಸೋಮವಾರದಿಂದ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆ. 6ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮಳೆ ಆರ್ಭಟ: ನಿರಂತರ ಮಳೆಗೆ ಬಾಳಿ ಬದುಕಿದ ಮನೆ ಕುಸಿತ, ಸಾವಿರಾರು ಹೆಕ್ಟೇರ್ ಬೆಳೆ ನಾಶ, ರೈತ ಕಂಗಾಲು
ಸೆ. 6ರವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯಲಿದೆ. ಸೆ. 6ರಂದು ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾದ್ಯತೆ ಇದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಮಾಹೆ, ಪಶ್ಚಿಮ ಬಂಗಾಳದಲ್ಲಿ ಅಧಿಕ ಪ್ರಮಾಣದ ಮಳೆಯಾಗಲಿದೆ. ಸಿಕ್ಕಿಂ, ಮೇಘಾಲಯ, ರಾಯಗಢ, ರತ್ನಗಿರಿ, ಪುಣೆ, ಕೊಲ್ಲಾಪುರ, ಸತಾರಾ ಮತ್ತು ಸಾಂಗ್ಲಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ತಮಿಳುನಾಡು, ರಾಯಲಸೀಮಾ, ತೆಲಂಗಾಣ, ಛತ್ತೀಸ್‌ಗಢ, ನಾಗಾಲ್ಯಾಂಡ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಇಂದು ಅಧಿಕ ಮಳೆಯಾಗಲಿದೆ.