Karnataka Rains: ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ, 4 ದಿನ ಗುಡುಗು ಸಹಿತ ಭಾರಿ ಮಳೆ

ಮುಂದಿನ 4 ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ, 4 ದಿನ ಗುಡುಗು ಸಹಿತ ಭಾರಿ ಮಳೆ
ಮಳೆ
Image Credit source: Twitter: Vijeth

Updated on: May 23, 2023 | 7:31 AM

ಮುಂದಿನ 4 ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಯಗಟಿ, ಸುಳ್ಯ, ದಾವಣಗೆರೆ, ಸುಬ್ರಹ್ಮಣ್ಯ, ಕಡೂರು, ಕೊಣನೂರು, ಪುತ್ತೂರು, ಗಂಗಾವತಿ, ಮುಧೋಳ, ಅಡಕಿ, ಹಿರೆಕೆರೂರು, ಕಂಪ್ಲಿ, ಬೆಂಗಳೂರು ನಗರ, ಭಾಗಮಂಡಲ, ಕೊಟ್ಟಿಗೆಹಾರ, ರಾಣೆಬೆನ್ನೂರು, ಕಳಸ, ಬೆಳ್ತಂಗಡಿ, ನಾಪೋಕ್ಲು, ಹಾರಂಗಿ, ಪಣಂಬೂರು, ಅಕ್ಕಿ ಆಲೂರು, ಗದಗ, ಚಿತ್ತಾಪುರ, ಮೂರ್ನಾಡು, ಅರಕಲಗೂಡು, ಚಿಂತಾಮಣಿ, ಶಿವಮೊಗ್ಗ, ಉತ್ತರಹಳ್ಳಿ, ಹೊನ್ನಾಳಿ, ಸಿರುಗುಪ್ಪ, ತಿಪಟೂರು, ಬಂಡೀಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಗಾಳಿ, ಮಳೆ ಸಾಧ್ಯತೆ; ಕರಾವಳಿಯಲ್ಲಿ ಹೈ ಅಲರ್ಟ್

ಎಷ್ಟು ದಿನ ಮಳೆ ಮುನ್ಸೂಚನೆ?
ಮೇ 27ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us