ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಂಕೋಲಾ, ಕುಮಟಾ, ಮಂಕಿ, ಗೋಕರ್ಣ, ಕಾರವಾರ, ಹುಕ್ಕೇರಿ, ಸಂಕೇಶ್ವರ, ಬೈಲಹೊಂಗಲ, ಲಿಂಗಸುಗೂರು, ಕುಂದಗೋಳ,ಬೇಲಿಕೇರಿ, ಮುದಗಲ್, ಕ್ಯಾಸಲ್ರಾಕ್, ಕುಂದಾಪುರ,ಸೇಡಬಾಳ, ಹುಬ್ಬಳ್ಳಿ, ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಮಂಗಳೂರು, ಕಾರ್ಕಳ, ಕದ್ರಾ, ಗೇರುಸೊಪ್ಪ, ಶಿರಾಲಿ, ಅಫ್ಜಲ್ಪುರ, ಬೆಳಗಾವಿ ವಿಮಾನ ನಿಲ್ದಾಣ, ಕಮ್ಮರಡಿ, ಮಾಣಿ,ಮ ಮುಲ್ಕಿ, ಉಪ್ಪಿನಂಗಡಿ, ಪುತ್ತೂರು, ನಿಪ್ಪಾಣಿ, ರಬಕವಿ, ಚಿಕ್ಕೋಡಿ, ಗುಂಜಿ, ಮಸ್ಕಿ, ನರಗುಂದ, ಭಾಗಮಂಡಲ, ತಾಳಗುಪ್ಪ, ರಾಮನಗರ, ಲಿಂಗನಮಕ್ಕಿ, ಜಯಪುರದಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗಲಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ