ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಪುತ್ತೂರು, ಕುಂದಾಪುರ, ಉಡುಪಿ, ಹೆಬ್ರಿ, ಹಾಲಾಡಿ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳದಲ್ಲಿ ಮಳೆ ಜಾಸ್ತಿಯಾಗಿದೆ. ಇಂದು ಕೂಡ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಲಿದೆ. ಇಂದಿನಿಂದ 3 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 20ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.
ಇಂದಿನಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಜೂ.19ರವರೆಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂ. 20ರವರೆಗೆ ಹಳದಿ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮುಂಗಾರು ಆರ್ಭಟ; ಬೆಂಗಳೂರಿನಲ್ಲಿ ಇಂದು ಚದುರಿದ ಮಳೆ
ಮುಂದಿನ ವಾರದಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ 22ರವರೆಗೆ ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶಿಸಲಿದೆ. ಅಸ್ಸಾಂ, ಮೇಘಾಲಯ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂನ ಕೆಲವು ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಒಡಿಶಾ, ಜಾರ್ಖಂಡ್, ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಕೂಡ ಮಳೆಯಾಗಲಿದೆ. ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ರಾಯಲಸೀಮಾ, ಕರಾವಳಿ ಮತ್ತು ದಕ್ಷಿಣ ಒಳಭಾಗ ಕರ್ನಾಟಕ, ಕೇರಳ, ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣ, ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಉತ್ತರ ಒಳನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ