Karnataka Rain: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ; ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಣೆ

Weather Today: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ; ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಣೆ
ಮಳೆ
Image Credit source: PTI
TV9kannada Web Team

| Edited By: Sushma Chakre

Sep 30, 2022 | 6:07 AM

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ (Karnataka Rains) ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡಿನ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಬೆಂಗಳೂರಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಗಾಗ ತುಂತುರು ಇಲ್ಲವೇ ಹಗುರ ಮಳೆ ಬೀಳಬಹುದು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಹ ಸಾಧಾರಣ ಮಳೆಯಾಗಲಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಸುಳಿಗಾಳಿ ತೀವ್ರತೆ ಹಾಗೂ ಸಣ್ಣ ಪ್ರಮಾಣದ ವೈಪರೀತ್ಯಗಳ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಲಕ್ಷಣಗಳು ಗೋಚರಿಸಿವೆ.

ನಿನ್ನೆಯಿಂದ ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅ. 2ರವರೆಗೂ ಮಳೆಯಾಗಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Bangalore Rain: ಮತ್ತೆ ರಾಜಧಾನಿಗೆ ಎಂಟ್ರಿ ಕೊಟ್ಟ ವರುಣ -ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ. ಈ ಸುಳಿಗಾಳಿಯು ಒಡಿಶಾ ಕರಾವಳಿ ಮಾರ್ಗವಾಗಿ ಸಾಗಲಿದೆ. ಹೀಗಾಗಿ ಇಂದು ಕರ್ನಾಟಕದ ಹಲವೆಡೆ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಪ್ರದೇಶಗಳಲ್ಲಿ ಇಂದು ಕೂಡ ಮಳೆ ಆಗಲಿದೆ. ಆದರೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕಲಬುರ್ಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆ

ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಯಾನಂ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆಯಿದೆ. ಅಕ್ಟೋಬರ್ 2ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ತೆಲಂಗಾಣ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada