Karnataka Rain: ಕರ್ನಾಟಕದಾದ್ಯಂತ ಇಂದಿನಿಂದ 3 ದಿನ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ

Karnataka Weather Today: ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರ್ನಾಟಕದಾದ್ಯಂತ ಇಂದಿನಿಂದ 3 ದಿನ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 07, 2022 | 5:52 AM

Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ (Kodagu Rain) ಮಳೆಯಿಂದ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ.

ಕಳೆದೊಂದು ವಾರದಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿದಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: ಮಳೆಯಿಂದಾಗಿ ಬೆಂಗಳೂರಿನಲ್ಲಿ ಕುಸಿದು ಬಿದ್ದ ಕಟ್ಟಡ: ಅದೃಷವಶಾತ್ ತಪ್ಪಿದ ಭಾರಿ ಅನಾಹುತ

ಮುಂದಿನ 3 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದ್ದು, ಅಧಿಕಾರಿಗಳು ಸ್ವಲ್ಪಮಟ್ಟಿಗೆ ನೀರು ಬಿಡುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಐತಿಹಾಸಿಕ ಶ್ರೀರಂಗಪಟ್ಟಣ ಪಟ್ಟಣದ ಕೆಲವು ಭಾಗಗಳು ಮತ್ತು ದೇವಾಲಯಗಳು ಜಲಾವೃತಗೊಂಡಿವೆ. ಕರಾವಳಿ ಭಾಗದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್?: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ ವಿಜಯಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ ಜಿಲ್ಲೆಗಳಿಗೆ ಕೂಡ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಹಿಮಾಚಯ ಪ್ರದೇಶ ಮತ್ತು ಡೆಕನ್ ಪ್ರಸ್ಥಭೂಮಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಕೊಂಕಣ, ಗೋವಾ, ಪೂರ್ವ ರಾಜಸ್ಥಾನ, ವಿದರ್ಭ, ಛತ್ತೀಸ್‌ಗಢ, ಒಡಿಶಾ ಮತ್ತು ತೆಲಂಗಾಣದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕವಾದ ಬೀಳುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಪೂರ್ವ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಶ್ಚಿಮ ರಾಜಸ್ಥಾನ ಮತ್ತು ರಾಯಲಸೀಮಾದಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ