Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ.

Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 08, 2022 | 7:00 AM

Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್​, ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಮಳೆ ಹೆಚ್ಚಾಗಲಿದೆ. ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ2  ದಿನ ಮೋಡಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೇಂಜ್​ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ (Kodagu Rain) ಮಳೆಯಿಂದ  ಆರೇಂಜ್ಅ ಲರ್ಟ್​ (Orange Alert) ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

ಮುಂದಿನ 2 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದೆ.

ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್?: ಬೆಳಗಾವಿ, ಬೀದರ್, ಕಲಬುರಗಿ, ಶಿವಮೊಗ್ಗ ಮತ್ತು ಹಾಸನ  ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.  ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,  ಕೊಡಗು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ನೀಡಲಾಗಿದೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ