AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ, ಹಾಸನದಲ್ಲಿ ಇನ್ನು 3 ದಿನ ಮಳೆ; ಹಳದಿ ಅಲರ್ಟ್ ಘೋಷಣೆ

Karnataka Weather Today: ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಿಂದ ಇನ್ನು 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇದರ ಜೊತೆಗೆ ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka Rain: ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ, ಹಾಸನದಲ್ಲಿ ಇನ್ನು 3 ದಿನ ಮಳೆ; ಹಳದಿ ಅಲರ್ಟ್ ಘೋಷಣೆ
ಸಂಗ್ರಹ ಚಿತ್ರ
TV9 Web
| Edited By: |

Updated on: Aug 23, 2022 | 6:07 AM

Share

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ (Rainfall) ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್​ 25ರವರೆಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ (ಆಗಸ್ಟ್ 23) ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಸತತವಾಗಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ ಸಾಧ್ಯತೆ

ಆಗಸ್ಟ್ 24ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ಆಗಸ್ಟ್ 25ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ ಹೆಚ್ಚಳ?: ಇಂದು ಪಶ್ಚಿಮ ರಾಜಸ್ಥಾನ ಮತ್ತು ಗುಜರಾತ್ ಪ್ರದೇಶದ ಉತ್ತರ ಭಾಗಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಮತ್ತು ಆಗಸ್ಟ್ 25 ರಂದು ಛತ್ತೀಸ್‌ಗಢದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಗಸ್ಟ್ 24ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್​ 25ರವರೆಗೆ ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮುಂದುವರಿದ ಮಳೆ; ಬೆಂಗಳೂರಿನಲ್ಲಿ ಚಳಿ ಶುರು

ಇಂದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು