ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ (Rainfall) ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್ 25ರವರೆಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ (ಆಗಸ್ಟ್ 23) ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಸತತವಾಗಿ ಮಳೆ ಸುರಿಯುತ್ತಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ ಸಾಧ್ಯತೆ
ಆಗಸ್ಟ್ 24ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ಆಗಸ್ಟ್ 25ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ ಹೆಚ್ಚಳ?:
ಇಂದು ಪಶ್ಚಿಮ ರಾಜಸ್ಥಾನ ಮತ್ತು ಗುಜರಾತ್ ಪ್ರದೇಶದ ಉತ್ತರ ಭಾಗಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಮತ್ತು ಆಗಸ್ಟ್ 25 ರಂದು ಛತ್ತೀಸ್‌ಗಢದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಗಸ್ಟ್ 24ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 25ರವರೆಗೆ ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮುಂದುವರಿದ ಮಳೆ; ಬೆಂಗಳೂರಿನಲ್ಲಿ ಚಳಿ ಶುರು
ಇಂದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.