Karnataka Rain: ಕರ್ನಾಟಕದಲ್ಲಿ ಮಳೆ ಅಬ್ಬರ; ಕರಾವಳಿ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಳದಿ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Mar 23, 2022 | 5:50 AM

Karnataka Weather Today: ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದೆ.

Karnataka Rain: ಕರ್ನಾಟಕದಲ್ಲಿ ಮಳೆ ಅಬ್ಬರ; ಕರಾವಳಿ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಳದಿ ಅಲರ್ಟ್​ ಘೋಷಣೆ
ಮಳೆ
Follow us on

ಬೆಂಗಳೂರು: ಅಂಡಮಾನ್‌ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಬೆಂಗಳೂರು (Bengaluru Rain) ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಇಂದು ಕೂಡ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಆಳವಾದ ಖಿನ್ನತೆಯ ಉಪಸ್ಥಿತಿಯು ಈ ಹವಾಮಾನ ಪರಿಸ್ಥಿತಿಗಳಿಗೆ ಕಾರಣ ಎನ್ನಲಾಗಿದೆ. ಗುಡುಗು ಸಹಿತ ಚಂಡಮಾರುತದ ಕಾರಣದಿಂದ ಮಾರ್ಚ್ 24ರವರೆಗೆ ದಕ್ಷಿಣ ಒಳಭಾಗ ಮತ್ತು ಕರಾವಳಿ ಕರ್ನಾಟಕದಾದ್ಯಂತ ಹಳದಿ ಅಲರ್ಟ್​ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಇಂದು ಹಾಗೂ ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ನಾಳೆ (ಮಾರ್ಚ್ 24) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಸುರಿಯುತ್ತಿರುವ ತುಂತುರು ಮಳೆಯಿಂದ ಬಿಸಿಯಾಗಿದ್ದ ಧರೆ ತಂಪಾಗಿದೆ. ಕರ್ನಾಟಕದಲ್ಲಿ ಮಾರ್ಚ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಮಾರ್ಚ್​ ತಿಂಗಳಲ್ಲಿ ರಾಜ್ಯಗಳಲ್ಲಿ ಕೇವಲ 3.6 ಮಿಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಪ್ರಸ್ತುತ ಮಳೆಯ ಚಟುವಟಿಕೆಯು ಬೆಂಗಳೂರು ಮತ್ತು ನೈಋತ್ಯ ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ 2 ದಿನಗಳವರೆಗೆ ಅಂದರೆ ಮಾರ್ಚ್ 24ರವರೆಗೆ ಮುಂದುವರಿಯುತ್ತದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚುಗಳ ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಇಡೀ ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುರುವಾರದವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಆರ್ದ್ರ ವಾತಾವರಣವಿದ್ದು, ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಗುರುವಾರ ಮತ್ತು ಶುಕ್ರವಾರ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಮಳೆ ಹೆಚ್ಚಾಗಲಿದೆ.

ಮಾರ್ಚ್ 24ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Bengaluru Rain: ಅಸಾನಿ ಚಂಡಮಾರುತದ ಪ್ರಭಾವ; ಬೆಂಗಳೂರು ನಗರದ ಹಲವೆಡೆ ಗಾಳಿ ಸಹಿತ ಮಳೆ

Cyclone Asani: ಇಂದು ಸಂಜೆ ಅಪ್ಪಳಿಸಲಿದೆ ಅಸಾನಿ ಚಂಡಮಾರುತ; ಅಂಡಮಾನ್​ನಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ ಘೋಷಣೆ