AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಕಡಿಮೆಯಾಗಲಿದ್ದು, ಆಗಸ್ಟ್ 15ರಿಂದ ಮತ್ತೆ ಜೋರಾಗಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Aug 10, 2025 | 7:59 AM

Share

ಬೆಂಗಳೂರು, ಆಗಸ್ಟ್​ 10: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಕಡಿಮೆಯಾಗಲಿದ್ದು, ಆಗಸ್ಟ್ 15ರಿಂದ ಮತ್ತೆ ಜೋರಾಗಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಳಗಾವಿ, ಬೀದರ್, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ನರಗುಂದ, ವಿಜಯಪುರ, ಕೋಲಾರ, ಹುಣಸಗಿ, ಲೋಕಾಪುರ, ಜಗಳೂರು, ಚಿಂತಾಮಣಿ, ಬರಗೂರು, ಗೌರಿಬಿದನೂರು, ಭರಮಸಾಗರ, ಯಲಬುರ್ಗಾ, ಬರಗೂರು, ಗೌರಿಬಿದನೂರು, ಪರಶುರಾಂಪುರ, ಲಕ್ಷ್ಮೇಶ್ವರ, ಗೋಕಾಕ್, ಗದಗ, ದಾವಣಗೆರೆ, ಮುನಿರಾಬಾದ್, ಸಿಂದಗಿ, ಸೈದಾಪುರ, ಹುನಗುಂದ, ಕಕ್ಕೇರಿ, ಗೇರುಸೊಪ್ಪ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಅಣ್ಣಿಗೆರೆ, ತಿಪಟೂರು, ಕಿಬ್ಬನಹಳ್ಳಿ, ಹಿರಿಯೂರು, ರಬಕವಿ, ಕುಷ್ಟಗಿ, ಬೆಳ್ಳೂರು, ಬಾದಾಮಿ, ಹಗರಿಬೊಮ್ಮನಹಳ್ಳಿ, ಆಗುಂಬೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಿನವೂ ಮಳೆಯಾಗುತ್ತಿದೆ. ಎಚ್​​ಎಎಲ್​ನಲ್ಲಿ29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದುವರೆದ ಮಳೆ, ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಹೊನ್ನಾವರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ