
ಬೆಂಗಳೂರು, ಆಗಸ್ಟ್ 10: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಕಡಿಮೆಯಾಗಲಿದ್ದು, ಆಗಸ್ಟ್ 15ರಿಂದ ಮತ್ತೆ ಜೋರಾಗಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಳಗಾವಿ, ಬೀದರ್, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ನರಗುಂದ, ವಿಜಯಪುರ, ಕೋಲಾರ, ಹುಣಸಗಿ, ಲೋಕಾಪುರ, ಜಗಳೂರು, ಚಿಂತಾಮಣಿ, ಬರಗೂರು, ಗೌರಿಬಿದನೂರು, ಭರಮಸಾಗರ, ಯಲಬುರ್ಗಾ, ಬರಗೂರು, ಗೌರಿಬಿದನೂರು, ಪರಶುರಾಂಪುರ, ಲಕ್ಷ್ಮೇಶ್ವರ, ಗೋಕಾಕ್, ಗದಗ, ದಾವಣಗೆರೆ, ಮುನಿರಾಬಾದ್, ಸಿಂದಗಿ, ಸೈದಾಪುರ, ಹುನಗುಂದ, ಕಕ್ಕೇರಿ, ಗೇರುಸೊಪ್ಪ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಅಣ್ಣಿಗೆರೆ, ತಿಪಟೂರು, ಕಿಬ್ಬನಹಳ್ಳಿ, ಹಿರಿಯೂರು, ರಬಕವಿ, ಕುಷ್ಟಗಿ, ಬೆಳ್ಳೂರು, ಬಾದಾಮಿ, ಹಗರಿಬೊಮ್ಮನಹಳ್ಳಿ, ಆಗುಂಬೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಿನವೂ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದುವರೆದ ಮಳೆ, ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಹೊನ್ನಾವರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ