
ಬೆಂಗಳೂರು, ಜುಲೈ 14: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ(Rain) ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಂಕಿ, ಸಿದ್ದಾಪುರ, ಗೋಕರ್ಣ, ಉಡುಪಿಯಲ್ಲಿ ಮಳೆಯಾಗಿದೆ. ಕೋಟಾ, ಕದ್ರಾ, ಕುಂದಾಪುರ, ಆಗುಂಬೆ, ಮಾಣಿ, ಕ್ಯಾಸಲ್ರಾಕ್, ಕುಮಟಾ, ಕಾರವಾರ, ಪುತ್ತೂರು, ಹೊನ್ನಾವರ, ಮುನಿರಾಬಾದ್, ಶೃಂಗೇರಿ, ಜಯಪುರ, ಕಮ್ಮರಡಿ, ಕೊಪ್ಪ, ಕೊಟ್ಟಿಗೆಹಾರ, ಮುಲ್ಕಿ, ಜೋಯ್ಡಾ, ಕುರ್ಡಿ, ದೇವರಹಿಪ್ಪರಗಿ, ಹುಂಚದಕಟ್ಟೆ, ಭಾಗಮಂಡಲ, ಭದ್ರಾವತಿ, ತರಿಕರೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನ ಸಾಕಷ್ಟು ಕಡೆಗಳಲ್ಲಿ ಭಾನುವಾರ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:22 am, Mon, 14 July 25