Karnataka Rains: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ

|

Updated on: May 27, 2024 | 7:38 AM

ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು,ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ
ಮಳೆ
Follow us on

ಮುಂದಿನ ಒಂದು ವಾರಗಳ ಕಾಲ ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಸಿಂದಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಎಚ್​ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕಕ್ಕೆ ಮೇ 31ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 30.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಾಮರಾಜನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ