AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಮೇ 17ರಿಂದ ಮಳೆ ಚುರುಕುಗೊಳ್ಳಲಿದ್ದು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್​ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್​, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ, ಗೋಕರ್ಣದಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on:May 19, 2025 | 7:29 AM

Share

ಬೆಂಗಳೂರು, ಮೇ 16: ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್​ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್​, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ, ಗೋಕರ್ಣದಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಕ್ತಿ ಚಂಡಮಾರುತದಿಂದಾಗಿ ತೆಲಂಗಾಣದಲ್ಲೂ ಮಳೆಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 am, Fri, 16 May 25

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ