Karnataka Rains: ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಮಳೆ ಶುರುವಾಗಿದ್ದು, ಈಗ ಮೋಡಕವಿದ ವಾತಾವರಣವಿದ್ದು, ಯಾವಾಗ ಬೇಕಾದರೂ ಮಳೆ ಬರಬಹುದು ಎನ್ನುವಂತಿದೆ. ಆಗಸ್ಟ್​ 10ರವರೆಗೂ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ,ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ

Karnataka Rains: ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ
ಮಳೆ
Image Credit source: PTI

Updated on: Aug 04, 2025 | 7:32 AM

ಬೆಂಗಳೂರು, ಆಗಸ್ಟ್​ 04: ರಾತ್ರಿಯಿಂದ ಬೆಳಗ್ಗೆವರೆಗೂ ಶಾಂತವಾಗಿ ಸುರಿದ ಮಳೆ(Rain), ತಂಪಾದ ವಾತಾವರಣ, ಬೆಂಗಳೂರೇ ಬೆಸ್ಟ್​​​ ಎನ್ನುವಂತಿದೆ. ದಟ್ಟ ಮೋಡ, ನೀರಿನಲ್ಲಿ ತೊಳೆದುಹೋದ ಧೂಳು, ಹಾಯಾದ ಗಾಳಿ ಮನಸ್ಸಿಗೆ ಮುದ ನೀಡುತ್ತಿದೆ. ಕರ್ನಾಟಕದೆಲ್ಲೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಮಳೆ ಶುರುವಾಗಿದ್ದು, ಈಗ ಮೋಡಕವಿದ ವಾತಾವರಣವಿದ್ದು, ಯಾವಾಗ ಬೇಕಾದರೂ ಮಳೆ ಬರಬಹುದು ಎನ್ನುವಂತಿದೆ. ಆಗಸ್ಟ್​ 10ರವರೆಗೂ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ,ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ನಗರ,ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನು ಹೊರತುಪಡಿಸಿ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೋಟಾ, ಮಂಕಿ, ಕುಂದಾಪುರ, ಗೇರುಸೊಪ್ಪ, ಆಗುಂಬೆ, ಉಡುಪಿ, ಶಿರಾಲಿ, ಧರ್ಮಸ್ಥಳ, ಶೃಂಗೇರಿ, ಸಿದ್ದಾಪುರ, ಕುಮಟಾ, ಕೊಟ್ಟಿಗೆಹಾರ, ಕಾರ್ಕಳ, ತ್ಯಾಗರ್ತಿ, ಶೋರಾಪುರ, ಕೃಷ್ಣರಾಜಪೇಟೆ, ಕಮ್ಮರಡಿ, ಹಾವೇರಿ, ಬೇಳೂರು, ಬನವಾಸಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರಿನಲ್ಲಿ ಆಗಸ್ಟ್​ 6ರ ನಂತರ ಭಾರಿ ಮಳೆ, ಯೆಲ್ಲೋ ಅಲರ್ಟ್​

ನೆಲೋಗಿ, ಎನ್​​ಆರ್​​ಪುರ, ಮುನಿರಾಬಾದ್, ಮಾಣಿ, ಜಯಪುರ, ಹುಂಚದಕಟ್ಟೆ, ಹೊನ್ನಾವರ, ಗೋಕರ್ಣ, ಕ್ಯಾಸಲ್​​ರಾಕ್, ಭಾಗಮಂಡಲ, ಬಂಟವಾಳ, ಬೈಲಹೊಂಗಲ, ಅಫ್ಜಲ್​ಪುರದಲ್ಲಿ ಮಳೆಯಾಗಿದೆ.
ಎಚ್​​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್​ಟ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ