Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಕರ್ನಾಟಕದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.5ರಂದು ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ, ಕಾರ್ಕಳ, ಕುಂದಾಪುರ, ಉಪ್ಪಿನಂಗಡಿ, ಸಿದ್ದಾಪುರ, ಬಂಟವಾಳ, ಜೋಯಿಡಾ, ಲೋಂಡಾ, ಚಿಕ್ಕೋಡಿ, ಕೊಪ್ಪ, ಎನ್ಆರ್ಪುರ, ಕಳಸ, ಹುಂಚದಕಟ್ಟೆ, ತ್ಯಾಗರ್ತಿ, ಮಧುಗಿರಿಯಲ್ಲಿ ಮಳೆಯಾಗಿದೆ.
ಆರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
ಎಚ್ಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Published On - 7:28 am, Tue, 3 June 25








