AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದು ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಇಂದು ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡವಾಗುತ್ತಿದ್ದರೂ ಮಳೆಯಾಗಿರಲಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಇಂದು ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on:Apr 28, 2025 | 7:27 AM

Share

ಬೆಂಗಳೂರು, ಏಪ್ರಿಲ್ 28: ಈಗಾಗಲೇ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಎರಡು ವಾರಗಳಿಂದ ಅಲ್ಲಲ್ಲಿ ಮಳೆ(Rain)ಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಸಿಲ ತಾಪ ಏರಿಕೆಯಾಗಿದ್ದು, ಜನರು ಮಳೆಗಾಗಿ ಹಾತೊರೆಯುವಂತಾಗಿದೆ. ಇಂದು ಬೆಂಗಳೂರು ಸೇರಿ ರಾಜ್ಯದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನರಗುಂದ, ಗದಗ, ಹಾವೇರಿ, ಯಲ್ಲಾಪುರ, ಉಪ್ಪಿನಂಗಡಿ, ಕಾರ್ಕಳ, ಧರ್ಮಸ್ಥಳ, ಮುಲ್ಕಿ, ಖಜೂರಿ, ಶಿಗ್ಗಾಂವ್, ತಿಪಟೂರು, ಎನ್​ಆರ್​ಪುರ, ನಾಪೋಕ್ಲು, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಇಂದಿನಿಂದ ಒಂದು ವಾರ ಕರ್ನಾಟಕದಾದ್ಯಂತ ಸುರಿಯಲಿದೆ ಭಾರಿ ಮಳೆ

ಬೀದರ್​ನಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Mon, 28 April 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!