AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಿನಲ್ಲಿ ಆಗಸ್ಟ್​ 6ರ ನಂತರ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 6ರಿಂದ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರಿನಲ್ಲಿ ಆಗಸ್ಟ್​ 6ರ ನಂತರ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on:Aug 03, 2025 | 7:58 AM

Share

ಬೆಂಗಳೂರು, ಆಗಸ್ಟ್​ 03: ಕರ್ನಾಟಕದಾದ್ಯಂತ ಮುಂಗಾರಿನ ಅಬ್ಬರ ಸ್ವಲ್ಪ ತಗ್ಗಿದೆ. ಆದರೆ ಆಗಸ್ಟ್​ 6ರ ನಂತರ ಮತ್ತೆ ಹೆಚ್ಚಳವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಬಳಿಕ ಭಾರಿ ಮಳೆ(Rain)ಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಆಗುಂಬೆ, ಶಿರಾಲಿ, ಮಂಕಿ, ಮಂಗಳೂರು, ಕೋಟಾ, ಹೊನ್ನಾವರ, ಭಾಗಮಂಡಲ, ಸುಳ್ಯ, ಹೊನ್ನಾವರ, ಶೃಂಗೇರಿ, ಶಕ್ತಿನಗರ, ಮೂಡುಬಿದಿರೆ, ಮಾಣಿ, ಮಂಗಳೂರು, ಕಾರ್ಕಳ, ಗೋಕರ್ಣ, ಗೇರುಸೊಪ್ಪ, ಅಂಕೋಲಾದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಆ.7ರವರೆಗೆ ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಎಚ್​​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 am, Sun, 3 August 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು