Karnataka Rains: ಕರ್ನಾಟಕದಲ್ಲಿ ಜೂನ್ 26ರಿಂದ ಹೆಚ್ಚಲಿದೆ ಮುಂಗಾರು ಅಬ್ಬರ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದಿನಿಂದಲೇ ಮಳೆ ಹೆಚ್ಚಾಗಲಿದ್ದು, ಜೂನ್ 26ರ ಬಳಿಕ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕದ್ರಾ, ಕ್ಯಾಸಲ್​​ರಾಕ್, ಸಿದ್ದಾಪುರ, ಮೂಡುಬಿದಿರೆ, ಕೊಟ್ಟಿಗೆಹಾರ, ಶೃಂಗೇರಿ, ಭಾಗಮಂಡಲ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಶಕ್ತಿನಗರ, ಮಂಗಳೂರು, ಯಲ್ಲಾಪುರ, ಗೇರುಸೊಪ್ಪ, ಸುಳ್ಯ, ಪುತ್ತೂರು, ಮಂಕಿ, ಬಂಟವಾಳ, ಕುಂದಾಪುರ, ಅಥಣಿ, ಲೋಂಡಾ, ಕೊಪ್ಪ, ಜೋಯ್ಡಾ, ಅಂಕೋಲಾ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದಲ್ಲಿ ಜೂನ್ 26ರಿಂದ ಹೆಚ್ಚಲಿದೆ ಮುಂಗಾರು ಅಬ್ಬರ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Jun 23, 2025 | 7:22 AM

ಬೆಂಗಳೂರು, ಜೂನ್ 23: ಕರ್ನಾಟಕದಲ್ಲಿ ಜೂನ್ 26ರಿಂದ ಮುಂಗಾರು(Monsoon) ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​​ರಾಕ್, ಸಿದ್ದಾಪುರ, ಮೂಡುಬಿದಿರೆ, ಕೊಟ್ಟಿಗೆಹಾರ, ಶೃಂಗೇರಿ, ಭಾಗಮಂಡಲ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಶಕ್ತಿನಗರ, ಮಂಗಳೂರು, ಯಲ್ಲಾಪುರ, ಗೇರುಸೊಪ್ಪ, ಸುಳ್ಯ, ಪುತ್ತೂರು, ಮಂಕಿ, ಬಂಟವಾಳ, ಕುಂದಾಪುರ, ಅಥಣಿ, ಲೋಂಡಾ, ಕೊಪ್ಪ, ಜೋಯ್ಡಾ, ಅಂಕೋಲಾ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಕಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕುಗೊಳ್ಳಲಿದ್ದು, ಜೂನ್ 26ರ ಬಳಿಕ ತೀರಾ ಹೆಚ್ಚಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us