Karnataka Rains: ಬೆಂಗಳೂರಿನಲ್ಲಿ ನಾಳೆಯಿಂದ ಮಳೆ, ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಏಪ್ರಿಲ್ 02: ಬೆಂಗಳೂರಿನಲ್ಲಿ ಮಂಗಳವಾರದಿಂದ ಮೋಡಕವಿದ ವಾತಾವರಣವಿದ್ದು, ಗುರುವಾರದಿಂದ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕರ್ನಾಟಕದ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:21 am, Wed, 2 April 25