Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

ಕರ್ನಾಟಕದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ಜೋರಾಗುತ್ತಿದೆ. ವಾರಗಳ ಕಾಲ ಕರಾವಳಿ ಸೇರಿಂದತೆ ಹಲವೆಡೆ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ
ಮಳೆ
Image Credit source: Business Today

Updated on: Sep 10, 2024 | 7:36 AM

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಶಿರಾಲಿ, ಗೇರುಸೊಪ್ಪ, ಗೋಕರ್ಣ, ಧರ್ಮಸ್ಥಳ, ಕದ್ರಾ, ಮಂಕಿ, ಕುಮಟಾ, ಕಮ್ಮರಡಿ, ಶೃಂಗೇರಿ, ಕಾರವಾರ, ಬೆಳ್ತಂಗಡಿ, ಪಣಂಬೂರು, ಕೆಂಭಾವಿ, ದೇವರಹಿಪ್ಪರಗಿಯಲ್ಲಿ ಮಳೆಯಾಗಿದೆ.ಕಮಲಾಪುರ, ಎನ್​ಆರ್​ಪುರ, ಉಪ್ಪಿನಂಗಡಿ, ಕಾರ್ಕಳ, ಪುತ್ತೂರು, ಯಲ್ಲಾಪುರ, ಸೈದಾಪುರ, ಮಸ್ಕಿ, ಇಳಕಲ್, ಬಾದಾಮಿ, ಕೊಟ್ಟಿಗೆಹಾರ, ಕೊಪ್ಪ, ಹುಂಚದಕಟ್ಟೆ, ಚನ್ನಗಿರಿ, ಕಳಸ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್​

ಎಚ್​ಎಎಲ್​ನಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us