AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜೂ.19ರವರೆಗೆ ಭಾರಿ ಮಳೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದ್ದು, ಜೂನ್ 19ರವರೆಗೆ ಮುಂದುವರೆಯಲಿದೆ. ಶಕ್ತಿನಗರ, ಮಂಗಳೂರು, ಕೊಟ್ಟಿಗೆಹಾರ, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಉಪ್ಪಿನಂಗಡಿ, ಮಾಣಿ, ಕ್ಯಾಸಲ್​ರಾಕ್, ಮಂಕಿ, ಕದ್ರಾ, ಧರ್ಮಸ್ಥಳ, ಅಂಕೋಲಾ, ಸುಳ್ಯ, ಉಡುಪಿ, ಕಾರ್ಕಳ, ಪುತ್ತೂರು, ಲೋಂಡಾ,ಆಗುಂಬೆಯಲ್ಲಿ ಮಳೆಯಾಗಿದೆ. ಗೇರುಸೊಪ್ಪ, ಮುಲ್ಕಿ, ಕುಂದಾಪುರ, ಕೋಟಾ, ಕಾರವಾರ, ಹೊನ್ನಾವರ, ಶೃಂಗೇರಿ, ನಾಪೋಕ್ಲು, ಸೋಮವಾರಪೇಟೆ, ಕುಮಟಾ, ಬೆಳಗಾವಿ, ಕಳಸ, ಖಾನಾಪುರ, ಕಿತ್ತೂರು,ಕೊಪ್ಪ, ಜಯಪುರ, ಹಳಿಯಾಳ, ಕಮ್ಮರಡಿ, ಪೊನ್ನಂಪೇಟೆ, ಬೇಲೂರು, ಹೊಸಕೋಟೆ, ಜೇವರಗಿ, ಹಾರಂಗಿ, ಸಂಕೇಶ್ವರ, ಹುಕ್ಕೇರಿ, ವಿಜಯಪುರ, ಬೈಲಹೊಂಗಲ, ಬಬಲೇಶ್ವರದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜೂ.19ರವರೆಗೆ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 16, 2025 | 7:21 AM

Share

ಬೆಂಗಳೂರು, ಜೂನ್ 16: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ ಆದರೂ ಮಳೆ(Rain)ಯ ಪ್ರಮಾಣ ಕಡಿಮೆ ಇದೆ. ಕಳೆದ ಎರಡು ದಿನಗಳಿಂದ ಮತ್ತೆ ಮಳೆ ಚುರುಕುಗೊಂಡಿದೆ. ಜೂನ್ 19ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಕ್ತಿನಗರ, ಮಂಗಳೂರು, ಕೊಟ್ಟಿಗೆಹಾರ, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಉಪ್ಪಿನಂಗಡಿ, ಮಾಣಿ, ಕ್ಯಾಸಲ್​ರಾಕ್, ಮಂಕಿ, ಕದ್ರಾ, ಧರ್ಮಸ್ಥಳ, ಅಂಕೋಲಾ, ಸುಳ್ಯ, ಉಡುಪಿ, ಕಾರ್ಕಳ, ಪುತ್ತೂರು, ಲೋಂಡಾ,ಆಗುಂಬೆಯಲ್ಲಿ ಮಳೆಯಾಗಿದೆ.

ಗೇರುಸೊಪ್ಪ, ಮುಲ್ಕಿ, ಕುಂದಾಪುರ, ಕೋಟಾ, ಕಾರವಾರ, ಹೊನ್ನಾವರ, ಶೃಂಗೇರಿ, ನಾಪೋಕ್ಲು, ಸೋಮವಾರಪೇಟೆ, ಕುಮಟಾ, ಬೆಳಗಾವಿ, ಕಳಸ, ಖಾನಾಪುರ, ಕಿತ್ತೂರು,ಕೊಪ್ಪ, ಜಯಪುರ, ಹಳಿಯಾಳ, ಕಮ್ಮರಡಿ, ಪೊನ್ನಂಪೇಟೆ, ಬೇಲೂರು, ಹೊಸಕೋಟೆ, ಜೇವರಗಿ, ಹಾರಂಗಿ, ಸಂಕೇಶ್ವರ, ಹುಕ್ಕೇರಿ, ವಿಜಯಪುರ, ಬೈಲಹೊಂಗಲ, ಬಬಲೇಶ್ವರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿನಗರದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 22.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!