AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಮಳೆ ಜೋರು

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದೆ, ಕಳೆದ ಒಂದು ವಾರದಿಂದ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಮಳೆ ಜೋರು
ಮಳೆ
ನಯನಾ ರಾಜೀವ್
|

Updated on:Jul 08, 2025 | 7:38 AM

Share

ಬೆಂಗಳೂರು, ಜುಲೈ 08: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಮಂಕಿ, ಭಾಗಮಂಡಲ, ಕಮ್ಮರಡಿ, ಯಲ್ಲಾಪುರ, ಮಾಣಿ, ಆಗುಂಬೆ, ಶೃಂಗೇರಿ, ಬಂಟವಾಳ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಮೂಡುಬಿದಿರೆ, ಧರ್ಮಸ್ಥಳ, ಸುಳ್ಯ, ಕದ್ರಾ, ಜೋಯ್ಡಾ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕೊಟ್ಟಿಗೆಹಾರ, ಸೋಮವಾರಪೇಟೆ, ಖಾನಾಪುರ, ಹುಂಚದಕಟ್ಟೆ, ಕೊಪ್ಪ, ಗೋಕರ್ಣ, ನಾಪೋಕ್ಲು, ವಿರಾಜಪೇಟೆ, ಹಳಿಯಾಳ, ಬಾಳೆಹೊನ್ನೂರು, ಕಳಸ, ತ್ಯಾಗರ್ತಿ, ಬಂಡೀಪುರ, ಬನವಾಸಿ, ಅಂಕೋಲಾ, ಉಡುಪಿ, ಮುಲ್ಕಿ, ಮುಂಡಗೋಡು, ನಿಪ್ಪಾಣಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:19 am, Tue, 8 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು