AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಜುಲೈ 3ರಿಂದ ಮಳೆಯ ಅಬ್ಬರ ಜೋರು, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 3ರ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ಜುಲೈ 3ರಿಂದ ಮಳೆಯ ಅಬ್ಬರ ಜೋರು, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on:Jun 29, 2025 | 7:50 AM

Share

ಬೆಂಗಳೂರು, ಜೂನ್ 29: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಕರಾವಳಿ ಅಬ್ಬರ ತುಸು ಹೆಚ್ಚಿದೆ. ಜುಲೈ 3ರಿಂದ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 3ರಬಳಿಕ ಮಳೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕದ್ರಾ, ಆಗುಂಬೆ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಯಲ್ಲಾಪುರ, ಗೇರುಸೊಪ್ಪ, ಹೊನ್ನಾವರ, ಉಡುಪಿ, ಸುಳ್ಯ, ಜೋಯ್ಡಾ, ಶೃಂಗೇರಿ, ಹುಂಚದಕಟ್ಟೆ, ಬಂಟವಾಳ, ಮೂಡುಬಿದಿರೆ, ಮಾಣಿ, ಕೋಟಾ, ಗೋಕರ್ಣ, ಕಿರವತ್ತಿ, ಶಕ್ತಿನಗರ, ಕುಮಟಾ, ಮುಂಡಗೋಡು, ಪೊನ್ನಂಪೇಟೆ, ಎನ್​ ಆರ್​ ಪುರ, ಜಯಪುರ ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಎಚ್​ಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Published On - 7:50 am, Sun, 29 June 25

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ