Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗುತ್ತಿದೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಸೆಪ್ಟೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ
ಮಳೆ
Image Credit source: Hindustan Times

Updated on: Aug 26, 2024 | 7:35 AM

ಕಳೆದ ಒಂದು ವಾರದಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲೂ ಮಳೆಯಾಗಲಿದೆ.
ಕ್ಯಾಸಲ್​ರಾಕ್, ಅಂಕೋಲಾ, ಕೊಟ್ಟಿಗೆಹಾರ, ಕದ್ರಾ, ಗೇರುಸೊಪ್ಪ, ಸಿದ್ದಾಪುರ, ಗೋಕರ್ಣ, ಕುಮಟಾ, ಕಮ್ಮರಡಿ, ಯಲ್ಲಾಪುರ, ಮಂಕಿ, ಕಾರವಾರ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಆಗುಂಬೆ, ಭಾಗಮಂಡಲ, ಕಿರವತ್ತಿ, ಲಿಂಗನಮಕ್ಕಿ, ಜೋಯಿಡಾ, ಬೆಳಗಾವಿ, ಶಿರಹಟ್ಟಿ, ಬೈಲಹೊಂಗಲ, ನಿಪ್ಪಾಣಿ, ಔರಾದ್, ಕೊಪ್ಪ, ಪಣಂಬೂರು, ಬೆಳ್ತಂಗಡಿ, ಧರ್ಮಸ್ಥಳ, ಕೋಟ, ಚಿಕ್ಕೋಡಿ, ಶಿಗ್ಗಾಂವ್, ಸಂಕೇಶ್ವರ, ಬೀದರ್, ಮಂಠಾಳ, ಕಳಸ, ಉಡುಪಿ, ಮಾಣಿ, ಭಾಲ್ಕಿ, ಕುಂದಗೋಳ, ಖಜೂರಿ, ಚಿಕ್ಕಬಳ್ಳಾಪುರ, ತ್ಯಾಗರ್ತಿ, ನಾಪೋಕ್ಲು, ತರೀಕೆರೆ, ಜಯಪುರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಮಹಾಮಳೆ, ಆರೆಂಜ್ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 23.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 25.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us