AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಜೂನ್​ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆ

ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಜೂನ್​ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆ
ಮಳೆImage Credit source: Slate.com
ನಯನಾ ರಾಜೀವ್
|

Updated on: Jun 18, 2024 | 7:35 AM

Share

ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು, ಇದೀಗ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕುಮಟಾ, ಗೇರುಸೊಪ್ಪ, ಗೋಕರ್ಣ, ಅಂಕೋಲಾ, ಗದಗ, ಮಂಕಿ, ಹಳಿಯಾಳ, ಶಿರಾಲಿ, ಸಂಕೇಶ್ವರ, ಕುಶಾಲನಗರ, ಕಾರವಾರ, ಹೊನ್ನಾವರ, ನಿಪ್ಪಾಣಿ, ಯಲ್ಲಾಪುರ, ಮುಂಡಗೋಡು, ಚಿಕ್ಕೋಡಿ, ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲ ಕಿರವತ್ತಿ, ಕದ್ರಾ, ಲೋಂಡಾ, ಹಾವೇರಿ, ಬೆಳ್ತಂಗಡಿ, ಔರಾದ್, ಚಿಂತಾಮಣಿ, ರಾಯಲ್ಪಾಡು, ಹಾರಂಗಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು, ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆಯಲ್ಲಿ 35.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ