AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​
ಮಳೆImage Credit source: India.com
ನಯನಾ ರಾಜೀವ್
|

Updated on: Jun 25, 2023 | 8:05 AM

Share

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನೈಋತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕಾರವಾರ ಹಾಗೂ ಹೊನ್ನಾವರದಲ್ಲಿ ಭಾರಿ ಮಳೆಯಾಗಿದೆ. ಮಂಕಿ, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಗೇರುಸೊಪ್ಪ, ಪಣಂಬೂರು, ಕೋಟ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕದ್ರಾ, ಕ್ಯಾಸಲ್ ರಾಕ್, ಕಾರ್ಕಳ, ಕೊಲ್ಲೂರು, ಲಿಂಗನಮಕ್ಕಿ, ಮಂಗಳೂರು, ಉಡುಪಿ, ಮುಲ್ಕಿ, ಸುಳ್ಯ, ಸುಬ್ರಹ್ಮಣ್ಯ, ತಾಳಗುಪ್ಪ, ಬನವಾಸಿ, ಮಾಣಿ, ಯಲ್ಲಾಪುರ, ಕೊಟ್ಟಿಗೆಹಾರ, ಮಂಚಿಕೇರಿ, ಔರಾದ್, ಭಾಲ್ಕಿ, ಸಕಲೇಶಪುರ, ಮೈಸೂರು, ಕಳಸ, ತುಮಕೂರು, ಗೌರಿಬಿದನೂರು, ಮೂರ್ನಾಡುವಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು