ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ, ಬೆಂಗಳೂರು ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆ ಬರುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಪೊನ್ನಂಪೇಟೆಯಲ್ಲಿ ಮಳೆಯಾಗಿದೆ, ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತಾ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಹವಾಮಾನದಲ್ಲಿ ಪುನಃ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನ ವಿಳಂಬವು ಆಗಬಹುದು ಎಂದು ಅಂದಾಜಿಸಲಾಗಿದೆ. ಪ್ರತಿಭಾರಿಯು ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಂದು ಕೇರಳ ಪ್ರವೇಶಿಸುತ್ತದೆ. ಅದರೊಂದಿಗೆ ಕೆಲವು ದಿನಗಳಲ್ಲಿ ಕರ್ನಾಟಕ ಪ್ರವೇಶಿಸುತ್ತವೆ. ಈ ಬಾರಿ ನಾಲ್ಕು ದಿನ ವಿಳಂಬ ಎನ್ನಲಾಗಿತ್ತು.
ಸದ್ಯ ಮತ್ತೆ ಕೆಲವು ದಿನ ತಡವಾದರೂ ಆಗಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ 2022ರಲ್ಲಿ ಮೇ 29ರಂದು ಮುಂಗಾರು ಆರಂಭವಾಗಿತ್ತು. ಕಳೆದ 18 ವರ್ಷಗಳಲ್ಲಿ ಕೇರಳದ ಮೇಲೆ ನೈಋತ್ಯ ಮುಂಗಾರು ಆರಂಭವಾಗುವ ದಿನಾಂಕದ ಕಾರ್ಯಾಚರಣೆಯ ಮುನ್ಸೂಚನೆಗಳು 2015 ಅನ್ನು ಹೊರತುಪಡಿಸಿ ಸರಿಯಾಗಿವೆ ಎಂದು ಭಾರತ ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ