ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ನವೆಂಬರ್ 23ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ
ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 20.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ