AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Aug 17, 2025 | 7:59 AM

Share

ಬೆಂಗಳೂರು, ಆಗಸ್ಟ್​ 17: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅದರ ಪರಿಣಾಮ ಕರ್ನಾಟಕ ಸೇರಿ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕೇವಲ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಕೆಲವೆಡೆ ಕೂಡ ಹೆಚ್ಚು ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಆಗುಂಬೆ, ಕಮ್ಮರಡಿ, ಗೇರುಸೊಪ್ಪ, ಶೃಂಗೇರಿ, ಸಿದ್ದಾಪುರ, ಕೊಪ್ಪ, ಧರ್ಮಸ್ಥಳ, ಭಾಗಮಂಡಲದಲ್ಲಿ ಅತ್ಯಧಿಕ ಮಳೆಯಾಗಿದೆ. ಮೂಡುಬಿದಿರೆ, ಜಯಪುರ, ಬೆಳ್ತಂಗಡಿ, ಸುಳ್ಯ, ಮುನಿರಾಬಾದ್, ಲೋಂಡಾ, ಕಳಸ, ಕದ್ರಾ, ಸೋಮವಾರಪೇಟೆ, ಶಕ್ತಿನಗರ, ನಾಪೋಕ್ಲು, ಕೊಟ್ಟಿಗೆಹಾರ, ಖಾನಾಪುರ, ಹುಂಚದಕಟ್ಟೆ, ಬಂಟವಾಳ, ಯಲ್ಲಾಪುರದಲ್ಲಿ ಮಳೆಯಾಗಿದೆ.

ನೆಲೋಗಿ, ಮುಲ್ಕಿ, ಮಂಕಿ, ಮಾಣಿ, ಮಂಗಳೂರು, ಕಾರ್ಕಳ, ಜೇವರ್ಗಿ, ಹೊನ್ನಾವರ, ಬೆಳಗಾವಿ, ಬಾಳೆಹೊನ್ನೂರು, ಔರಾದ್, ಝಲ್ಕಿ, ಉಪ್ಪಿನಂಗಡಿ, ತ್ಯಾಗರ್ತಿ, ಸೇಡಬಾಳ, ಪುತ್ತೂರು, ನಿಪ್ಪಾಣಿ, ಎನ್​​ಆರ್​​ಪುರ, ಕುಮಟಾ, ಹಳಿಯಾಳ, ಬೀದರ್​​ನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ವಾಯುಭಾರ ಕುಸಿತ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು, ಆರೆಂಜ್ ಅಲರ್ಟ್​

ಸಿಂದಗಿ, ಶಿರಹಟ್ಟಿ, ಬೈಲಹೊಂಗಲ, ಯಲಬುರ್ಗಾ, ನರಗುಂದ, ಕುಂದಾಪುರ, ಕೋಟ, ಹುಕ್ಕೇರಿ, ಹಾರಂಗಿ, ದಾವಣಗೆರೆ, ಚಿತ್ತಾಪುರ, ಬೆಂಗಳೂರು, ಬಾದಾಮಿ, ಅಥಣಿ, ಅರಕಲಗೂಡು, ಅಂಕೋಲಾ, ಆನವಟ್ಟಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕೂಡ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಎಚ್​​ಎಎಲ್​​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು