AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಕಡೆ ಮಳೆ, ಜೂನ್ 10ರ ಬಳಿಕ ಮಳೆ ಹೆಚ್ಚಳ

ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜೂನ್ 10ರ ಬಳಿಕ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಕಡೆ ಮಳೆ, ಜೂನ್ 10ರ ಬಳಿಕ ಮಳೆ ಹೆಚ್ಚಳ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 06, 2025 | 7:28 AM

Share

ಬೆಂಗಳೂರು, ಜೂನ್ 06: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ ಅಂತ್ಯದಲ್ಲಿ ಎಲ್ಲೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು. ಇದೀಗ ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕದ್ರಾ, ಕ್ಯಾಸಲ್​ರಾಕ್, ಮಂಕಿ, ಆಗುಂಬೆ, ಯಲ್ಲಾಪುರ, ಅಫ್ಝಲ್​ಪುರ, ಶಿಗ್ಗಾಂವ್, ಕಲಘಟಗಿ, ಲೋಂಡಾ, ಚಿಕ್ಕೋಡಿ, ಹೊನ್ನಾವರ, ಕುಮಟಾ, ಜೋಯಿಡಾ, ಗೇರುಸೊಪ್ಪ, ಮಂಗಳೂರು, ಪಣಂಬೂರು, ಮುಂಡಗೋಡು, ಮುಲ್ಕಿ, ಕಾರವಾರ, ಕುಂದಾಪುರ, ಅಂಕೋಲಾದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More