
ಬೆಂಗಳೂರು, ಜೂನ್ 06: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ ಅಂತ್ಯದಲ್ಲಿ ಎಲ್ಲೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು. ಇದೀಗ ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕದ್ರಾ, ಕ್ಯಾಸಲ್ರಾಕ್, ಮಂಕಿ, ಆಗುಂಬೆ, ಯಲ್ಲಾಪುರ, ಅಫ್ಝಲ್ಪುರ, ಶಿಗ್ಗಾಂವ್, ಕಲಘಟಗಿ, ಲೋಂಡಾ, ಚಿಕ್ಕೋಡಿ, ಹೊನ್ನಾವರ, ಕುಮಟಾ, ಜೋಯಿಡಾ, ಗೇರುಸೊಪ್ಪ, ಮಂಗಳೂರು, ಪಣಂಬೂರು, ಮುಂಡಗೋಡು, ಮುಲ್ಕಿ, ಕಾರವಾರ, ಕುಂದಾಪುರ, ಅಂಕೋಲಾದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಬೆಂಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ