ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ತಂದ ಅವಾಂತರ, ಇಬ್ಬರು ಸಾವು

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಲ್ಲಿ ಸಂತಸ ಮನೆ ಮಾಡಿದೆ. ಅದರಲ್ಲೂ ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಧಾರವಾಡ, ಚಿಕ್ಕಮಗಳೂರು, ಬಾಗಲಕೋಟೆ ಸೇರಿದಂತೆ ಹಲವೆಡೆ ಮಳೆರಾಯ ಭಾರೀ ಅವಾಂತರ ಸೃಷ್ಟಿಸಿದ್ದಾನೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಿದೆ? ಏನೆಲ್ಲಾ ಅವಾಂತರಗಳು ಆಗಿವೆ ಎನ್ನುವ ಒಂದು ವರದಿ ಇಲ್ಲಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ತಂದ ಅವಾಂತರ, ಇಬ್ಬರು ಸಾವು
ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ತಂದ ಅವಾಂತರ, ಇಬ್ಬರು ಸಾವು
Follow us
ಗಂಗಾಧರ​ ಬ. ಸಾಬೋಜಿ
|

Updated on: May 23, 2024 | 9:58 PM

ಬೆಂಗಳೂರು, ಮೇ 23: ರಾಜ್ಯದಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಇದೇ ಅವಧಿಯಲ್ಲಿ ಸುರಿಯುವ ಸರಾಸರಿ ಮುಂಗಾರು ಪೂರ್ವ ಮಳೆಗೆ (Rain) ಹೋಲಿಸಿದರೆ ಉತ್ತಮ ಮಳೆಯಾಗಿದೆ. ಐಎಂಡಿ (IMD) ಪ್ರಕಾರ, ಕರ್ನಾಟಕದಲ್ಲಿ ಈ ವರ್ಷ ಮಾರ್ಚ್‌ನಿಂದ ಮೇ 21ರ ನಡುವೆ 107.8 ಮಿಮೀ ಮಳೆ ಆಗಿದೆ. ಆ ಮೂಲಕ ಈ ವರ್ಷ 23 ಮಿಮೀ ಹೆಚ್ಚುವರಿ ಮಳೆ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕೆಲ ದಿನಗಳಿಂದ ಧಾರಾಕಾರ ಮಳೆ ಆಗುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸಿದ್ದಾನೆ. ಜೊತೆಗೆ ಅವಾಂತರಗಳನ್ನು ಸೃಷ್ಟಿಸಿದ್ದಾನೆ.

ಸಿಡಿಲು ಬಡಿದು ಓರ್ವ ಮಹಿಳೆ ಸಾವು: ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಾದ್ಯಂತ ಗುಡುಗು ಸಿಡಿಲು ಸಹಿತ ಮಳೆ ಆಗಿದೆ. ಪರಿಣಾಮ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದರೆ ನಾಲ್ವರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶೋಭಾ ಕೃಷ್ಣಾ ಕುಗುಡೆ(45) ಮೃತ ಮಹಿಳೆ.

ಇದನ್ನೂ ಓದಿ: ಧಾರವಾಡದಲ್ಲಿ ಇವತ್ತು ಮತ್ತೇ ಜೋರು ಮಳೆ, ಜನ ಮತ್ತು ರೈತ ಸಮುದಾಯ ಖುಶ್!

ಮಲ್ಲಪ್ಪ ಮೇತ್ರಿ, ಭಾರತಿ ಕಮತೆ, ಬಾಬುರಾವ್ ಚವ್ಹಾನ್, ಪ್ರವೀಣ್ ದರ್ಮಟ್ಟಿ ಅವರನ್ನು ರಾಯಬಾಗ ನಿಸರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ರಾಯಬಾಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಕೂಡ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಯಾದಗಿರಿ ನಗರದ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಆಗಿದೆ. ಬಿರುಗಾಳಿ ಮಳೆ ಅಬ್ಬರಕ್ಕೆ ಬೃಹತ್ ಮರದ ಕೊಂಬೆಗಳು ಮುರಿದುಬಿದ್ದಿವೆ. ಲೋಕೋಪಯೋಗಿ ಇಲಾಖೆ ಕಚೇರಿ, ಶಿವನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆ ನೀರಿನಿಂದ ಲೋಕೋಪಯೋಗಿ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಬಿರುಗಾಳಿ ಸಹಿತ ಮಳೆ ಅಬ್ಬರಕ್ಕೆ ಮನೆ ಮೇಲ್ಚಾವಣಿ ಹಾರಿಹೋಗಿದೆ.

ಮಳೆ ಗಾಳಿಗೆ ಹಾರಿ ಹೋದ ದನದ ಕೊಟ್ಟಿಗೆಯ ಶೆಡ್‌

ಧಾರವಾಡ ತಾಲೂಕಿನ ಹಂಗರಕಿ‌ ಗ್ರಾಮದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಗೆ ದನದ ಕೊಟ್ಟಿಗೆಯ ಶೆಡ್‌ಗೆ ಹಾನಿ ಆಗಿದೆ. ಬಿರುಗಾಳಿಗೆ ಶೆಡ್‌ನ ಮೇಲ್ಚಾವಣಿ ಶೀಟ್ ಹಾರಿ ಹೋಗಿದೆ. ಬಸವರಾಜ್ ಬಡಿಗೇರ ಎಂಬುವರಿಗೆ ಸೇರಿದ ಶೆಡ್‌ಗೆ ಹಾನಿ ಆಗಿದೆ. ಮೇವು ಸಂಗ್ರಹ ಹಾಗೂ ಜಾನುವಾರು ಕಟ್ಟಲು ಶೆಡ್ ನಿರ್ಮಿಸಿದ್ದರು. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಧಾರಾಕಾರ ಮಳೆ: ಬೆಳೆ ಹಾನಿ

ಬಾಗಲಕೋಟೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಿಂದ ಬೆಳೆ ಹಾನಿ ಸಂಭವಿಸಿದೆ. ತುಳಸಿಗೇರಿ, ಹಿರೇಶೆಲ್ಲಿಕೇರಿ, ದೇವನಾಳದಲ್ಲಿ ಮಳೆಯಿಂದಾಗಿ ಬೆಳೆ ಹಾನಿ ಆಗಿದೆ. ಭಾರಿ ಮಳೆಯಿಂದ ದಾಳಿಂಬೆ, ಚಿಕ್ಕು, ಪಪ್ಪಾಯಿ, ಕಬ್ಬು ಬೆಳೆ ನಾಶವಾಗಿದೆ. ದೇವನಾಳ ಗ್ರಾಮದಲ್ಲಿ ಮನೆಯ ಶೀಟ್​ ಹಾರಿ ಹತ್ತಾರು ಮನೆಗಳಿಗೆ ಹಾನಿ ಉಂಟಾಗಿದೆ.

ಹೆದ್ದಾರಿ ಮೇಲೆ‌ ಧರೆಗುರುಳಿದ ಮರ 

ಬೆಳಗಾವಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಿಂದ ಅವಾಂತರ ಉಂಟಾಗಿದ್ದು, ರೂಪಿನಾಳ ಗ್ರಾಮದ ಬಳಿ ಹೆದ್ದಾರಿ ಮೇಲೆ‌ ಮರ ಧರೆಗುರುಳಿದೆ. ಹೀಗಾಗಿ ಚಿಕ್ಕೋಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಕಳೆದ 2 ಗಂಟೆಯಿಂದ ಸಂಚಾರ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆ: ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್

ವಿಜಯಪುರ ಜಿಲ್ಲೆಯಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ ಆಗಿದೆ. ಮುದ್ದೇಬಿಹಾಳ ತಾಲೂಕಿನಲ್ಲಿ ಮಳೆಯಿಂದ ಹಲವೆಡೆ ಅವಾಂತರ ಉಂಟಾಗಿದೆ. ಸಿಡಿಲು ಬಡಿದು ಎರಡು ಹಸು ಸಾವನ್ನಪ್ಪಿವೆ. ಬಸವರಾಜ ಪಾಟೀಲ್, ಬಸಪ್ಪ ಉಪ್ಪಲದಿನ್ನಿ ಎಂಬುವರಿಗೆ ಹಸುಗಳು ಸೇರಿದ್ದವು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಶಿರಸಿ, ಕಾರವಾರ, ಯಲ್ಲಾಪುರ, ಜೋಯಿಡಾ, ಹೊನ್ನಾವರ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಬೆಳಗಿನಿಂದ ಜಿಲ್ಲೆಯ ಹಲವು ಭಾಗಗಳು ಮೋಡ ಕವಿದ ವಾತಾವರಣವಿದ್ದು, ಸಂಜೆಯಾಗುತಿದ್ದಂತೆ ಮಳೆ ಆರಂಭವಾಗುವ ಮೂಲಕ ಉಷ್ಣಾಂಶ ಇಳಿಕೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?