AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದಿನಿಂದ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Weather Forecast: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗಿಂತಲೂ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಇಂದಿನಿಂದ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಳೆ Image Credit source: PTI
Follow us
ನಯನಾ ರಾಜೀವ್
|

Updated on:Apr 03, 2025 | 1:59 PM

ಬೆಂಗಳೂರು, ಏಪ್ರಿಲ್ 03: ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಗಾಳಿ 30-40 ಕಿ,ಮೀ ವೇಗದಲ್ಲಿ ಬೀಸಿದರೆ, ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 am, Thu, 3 April 25

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್