ಕರಾವಳಿ ಜಿಲ್ಲೆಗಳಲ್ಲಿ ನಿಲ್ಲದ ಮಳೆ ಅಬ್ಬರ: ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ನೋಡಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಅಬ್ಬರದಿಂದ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಅತ್ತ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿಯೂ ಭಾರಿ ಮಳೆ ಆಗುತ್ತಿದೆ. ರಾಜ್ಯದ ಎಲ್ಲೆಲ್ಲಿ ಮಳೆ ಪರಿಸ್ಥಿತಿ ಹೇಗಿದೆ ಎಂಬ ವಿವರ ಇಲ್ಲಿದೆ.

ಕರಾವಳಿ ಜಿಲ್ಲೆಗಳಲ್ಲಿ ನಿಲ್ಲದ ಮಳೆ ಅಬ್ಬರ: ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ನೋಡಿ
ಮಳೆಯಿಂದಾಗಿ ಕಡಲು ಪ್ರಕ್ಷುಬ್ಧಗೊಂಡಿರುವುದು
Follow us
|

Updated on: Jul 10, 2024 | 6:37 AM

ಬೆಂಗಳೂರು, ಜುಲೈ 10: ಕರಾವಳಿ ಭಾಗದಲ್ಲಿ ಮಳೆ ಸಾಲು ಸಾಲು ಅವಾಂತರಗಳನ್ನು ಸೃಷ್ಟಿಸಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಮೀನು, ಮನೆ, ರಸ್ತೆಗಳನ್ನು ಬಿಡದೇ ಎಲ್ಲವನ್ನೂ ವರುಣ ಆಪೋಷನ ತೆಗೆದುಕೊಳ್ಳುತ್ತಿದ್ದಾನೆ. ಭಾರಿ ಮಳೆಯ ಪರಿಣಾಮ ಕಾರವಾರದ ಕದ್ರಾ ಜಲಾಶಯದಿಂದ ಬಿಟ್ಟು ನೀರು ಅಸ್ನೋಟಿ ಗ್ರಾಮದ ಮನೆಗಳಿಗೆ ನುಗ್ಗಿದೆ. ಕೃಷಿ ಜಮೀನು ಸಂಪೂರ್ಣವಾಗಿ ಜಲಾವೃತವಾಗಿದೆ. ದೇವಸ್ಥಾನದ ಸುತ್ತಲೂ ನೀರು ಆವರಿಸಿದ್ದು, ದೇವರಿಗೂ ಜಲ ದಿಗ್ಬಂಧನವಾಗಿದೆ.

ಸಂತ್ರಸ್ತರನ್ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ ಎನ್​​ಡಿಆರ್​ಎಫ್

ಉತ್ತರ ಕನ್ನಡ ಜಿಲ್ಲೆಯ ಶರಾವತಿ ಹಾಗೂ ಗುಂಡಬಾಳ ನದಿಗಳು ಅಪಾಯದ ಮಟ್ಟ ಮೀರಿವೆ. ಕಡತೋಕ, ಭಾಸ್ಕೇರಿ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಎನ್​ಡಿಆರ್​ಎಫ್​ ತಂಡ ಸಂತ್ರಸ್ತರನ್ನ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

ಹೊನ್ನಾವರ ತಾಲೂಕಿನಲ್ಲಿ ಹಿರೆಕಟ್ಟು ಹಾಗೂ ಬಡಗಣಿ ಹಳ್ಳ ಉಕ್ಕಿ ಹರಿದಿದೆ. ಹಳ್ಳದ ನೀರು ಅಡಕೆ, ಭತ್ತದ ಗದ್ದೆಗೆ ನುಗ್ಗಿದ್ದು, ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿದೆ.

Karnataka Rains, Heavy monsoon rain across coastal districts and other parts of state, Kannada news

ಉತ್ತರ ಕನ್ನಡದ ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಕೃಷಿ ಭೂಮಿ ಜಲಾವೃತಗೊಂಡಿವೆ

ಕಾರವಾರ ತಾಲೂಕಿನ ಗೋಯರ್ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳಿವೆ. ಕಾಡಿನ ಮಧ್ಯೆ ಇದ್ದ ಒಂದೇ ಒಂದು ರಸ್ತೆ ಸಂಪರ್ಕವೂ ಸದ್ಯ ಕಡಿತವಾಗಿದೆ. ಜಿಲ್ಲೆಯಲ್ಲಿ ಮಳೆ ಇಷ್ಟೆಲ್ಲ ರಗಳೆ ಸೃಷ್ಟಿಸಿದ್ರೂ, ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಪತ್ತೆಯೇ ಇಲ್ಲ ಅಂತ ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಫಾಲ್ಸ್, ಬೀಚ್​ಗಳಿಗೆ ಪ್ರವೇಶ ನಿರ್ಬಂಧ

ಮಳೆಯಿಂದ, ವಿಭೂತಿ ಫಾಲ್ಸ್​​ನಲ್ಲಿ ಜಲವೈಭವ ಮರುಕಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಧಾರಾಕಾರ ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಮಂಗಳೂರಿನ ಪಣಂಬೂರು ಬೀಚ್​ನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಬೇಲಿ ಹಾಕಿದ್ದಾರೆ.

Karnataka Rains, Heavy monsoon rain across coastal districts and other parts of state, Kannada news

ಮಲಗಿದ್ದಾಗಲೇ ಮನೆ ಕುಸಿದು ತಾಯಿ, ಮಗ ಸಾವು

ಬೆಳಗಾವಿ ಗಡಿ ಭಾಗದ ಗೋವಾ ಪ್ರದೇಶಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಧಾರಕಾರ ಮಳೆಯಿಂದ ನ್ಯೂರಾ ಮಂಡೋರ್​​​ನಲ್ಲಿ ಮನೆ ಕುಸಿದು, ತಾಯಿ ಮರಿಯಾ ಮಗ ಅಲ್ಫಾರ್ಡ್​​ ಮೃತಪಟ್ಟಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದಾಗಲೇ ಅನಾಹುತ ನಡೆದಿದೆ.

‘ಪಂಚಗಂಗಾ’ ಪ್ರವಾಹ; ನಿಪ್ಪಾಣಿ ಭಾಗದಲ್ಲಿ ನೆರೆ ಆತಂಕ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಂಚಗಂಗಾ ನದಿ ಪ್ರಚಂಡ ರೂಪ ತಾಳಿದೆ. 32 ಅಡಿಗಿಂತ ಹೆಚ್ಚಿಗೆ ನೀರಿನ ಹರಿವು ಏರಿದ್ದು, ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ನಿಪ್ಪಾಣಿಯ ಹಲವು ಗ್ರಾಮಗಳಲ್ಲಿ ಪ್ರವಾಹದ ಆತಂಕ ಮನೆಮಾಡಿದೆ. ವಾರದಿಂದ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆ ಖಾನಾಪುರ ವ್ಯಾಪ್ತಿಯಲ್ಲಿ ಮನೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಲ್ಲೆಲ್ಲಿ ಪ್ರವಾಹ, ಎಷ್ಟು ಮನೆಗಳು ಹಾನಿ? ಸಂಪೂರ್ಣ ಮಾಹಿತಿ ನೀಡಿದ ಸಿಎಂ

ಘಟಪ್ರಭೆ ಪ್ರತಾಪದಿಂದ ಹುಕ್ಕೇರಿಯ ಹುಣ್ಣೂರಿನಲ್ಲಿರುವ ವಿಠ್ಠಲನ ಮಂದಿರ ಸಂಪೂರ್ಣವಾಗಿ ಮುಳುಗಿದೆ. 148 ಅಡಿ ಎತ್ತರದ ದೇಗುಲದಲ್ಲಿ ಸದ್ಯ, ನಾಲ್ಕು ಅಡಿಗಳ ಗೋಪುರ ಮಾತ್ರ ಕಾಣುತ್ತಿದೆ.

ತುರ್ತು ವಿಪತ್ತು ನಿರ್ವಹಣೆಗೆ ಸಿಎಂ ಸೂಚನೆ

Karnataka Rains, Heavy monsoon rain across coastal districts and other parts of state, Kannada news

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ನೆರೆ, ಮನೆಗಳಿಗೆ ಹಾನಿ, ವಿಪತ್ತು ನಿರ್ವಹಣೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಮಳೆಯಿಂದ 3,714 ಮನೆಗಳಿಗೆ ಹಾನಿಯಾಗಿದೆ. ನೆರೆ ಉಂಟಾಗುವ ಸ್ಥಳಗಳನ್ನ ಮೊದಲೇ ಗುರುತಿಸಿದ್ದೇವೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿದೆ. ಎಸ್​ಡಿಆರ್​ಎಫ್​ನಡಿ ಪರಿಹಾರ ನೀಡಲು‌ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಭಾನುವಾರ ಮನೆ ಬಳಿ ಪೌರ ಕಾರ್ಮಿಕರಿಗೆ ಸೆಲ್ಫಿ ನೀಡಿದ ನಟ ಧ್ರುವ ಸರ್ಜಾ
ಭಾನುವಾರ ಮನೆ ಬಳಿ ಪೌರ ಕಾರ್ಮಿಕರಿಗೆ ಸೆಲ್ಫಿ ನೀಡಿದ ನಟ ಧ್ರುವ ಸರ್ಜಾ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ