Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್​

ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಮಳೆಯಾಗಲಿದೆ. ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್​ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್​
ಮಳೆ
Image Credit source: PTI

Updated on: Jun 17, 2025 | 7:24 AM

ಬೆಂಗಳೂರು, ಜೂನ್ 17: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.
ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಮಳೆಯಾಗಲಿದೆ.

ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್​ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಮುಲ್ಕಿ, ಉಡುಪಿ, ಅಂಕೋಲಾ, ಯಲ್ಲಾಪುರ, ಶೃಂಗೇರಿ, ಕಳಸ, ಸುಳ್ಯ, ಜೋಯ್ಡಾ, ಕಿತ್ತೂರು, ಖಾನಾಪುರ, ಹುಂಚದಕಟ್ಟೆಯಲ್ಲಿ ಕೂಡ ಮಳೆಯಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು

ತ್ಯಾಗರ್ತಿ, ಕೊಪ್ಪ, ವಿರಾಜಪೇಟೆ, ನಾಪೋಕ್ಲು, ಗೋಕರ್ಣ, ಬನವಾಸಿ, ಹಳಿಯಾಳ, ಬೆಳಗಾವಿ, ನಿಪ್ಪಾಣಿ, ಸಂಕೇಶ್ವರ, ಪೊನ್ನಂಪೇಟೆ, ಬಾಳೆಹೊನ್ನೂರು, ಎನ್​ಆರ್​​ಪುರ, ಹುಕ್ಕೇರಿ, ಹಿಡಕಲ್, ಚಿಕ್ಕೋಡಿ, ಬೈಲಹೊಂಗಲ, ಧಾರವಾಡ, ಗೋಕಾಕ್, ಚಿಕ್ಕೋಡಿ, ಶಿಗ್ಗಾಂವ್, ಜಗಳೂರು, ಭದ್ರಾವತಿ, ಕಡೂರು, ಹೊನ್ನಾಳಿ, ಬಂಡೀಪುರ, ಬೇಳೂರು, ಹಾರಂಗಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.ಎಚ್​​ಎಎಲ್​​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿ ಏರ್​ಪೋರ್ಟ್​ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us