Karnataka Rains: ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್, ಜು.24ರವರೆಗೂ ಹುಚ್ಚು ಮಳೆ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಜುಲೈ 18: ಕರ್ನಾಟಕದ ಬಹುತೇಕ ಕಡೆ ಮಳೆ ಹೆಚ್ಚಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 24ರವರೆಗೂ ಭಾರಿ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮುಲ್ಕಿ, ಮಾಣಿ, ಶಕ್ತಿನಗರ, ಕೋಟಾ, ಬಂಟವಾಳ,ಕಾರವಾರ, ಉಡುಪಿ, ಕಾರ್ಕಳ, ಭಾಗಮಂಡಲ, ಕುಂದಾಪುರ, ಮೂಡುಬಿದಿರೆ, ಹುಣಸಗಿ, ಬೆಳ್ತಂಗಡಿ, ಆಗುಂಬೆ, ಗೋಕರ್ಣ, ಹೊನ್ನಾವರದಲ್ಲಿ ಹೆಚ್ಚು ಮಳೆಯಾಗಿದೆ.
ಕ್ಯಾಸಲ್ರಾಕ್, ಧರ್ಮಸ್ಥಳ, ನಾಪೋಕ್ಲು, ಕುಷ್ಟಗಿ, ಕುಮಟಾ, ಸಿದ್ದಾಪುರ, ಇಳಕಲ್, ಸರಗೂರು, ಬೆಳ್ಳೂರು, ಶೃಂಗೇರಿ, ಮಾಗಡಿ, ಹಗರಿಬೊಮ್ಮನಹಳ್ಳಿ, ಬಂಡೀಪುರ, ಕುಕನೂರು, ತಾವರಗೇರಾ, ಯಲಬುರ್ಗಾ, ಗೇರುಸೊಪ್ಪ, ಪೊನ್ನಂಪೇಟೆ, ಅಜ್ಜಂಪುರ, ಮದ್ದೂರು, ಚಿಕ್ಕಬಳ್ಳಾಪುರ, ಕದ್ರಾ, ಮದಗಲ್, ಗಂಗಾವತಿ, ನಾರಾಯಣಪುರ, ಬೇಗೂರು, ಎಚ್ಡಿ ಕೋಟೆ, ಹೆಸರಘಟ್ಟ, ತ್ಯಾಗರ್ತಿ, ಗುಂಡ್ಲುಪೇಟೆ, ಚನ್ನಗಿರಿ, ದುರ್ಗಾ, ಕೃಷ್ಣರಾಜಪೇಟೆ, ಹುಣಸೂರು, ಕೊಟ್ಟಿಗೆಹಾರ, ಎಂಎಂ ಹಿಲ್ಸ್, ಚಾಮರಾಜನಗರ, ಕಳಸ, ಜಗಳೂರು, ಬಾಳೆಹೊನ್ನೂರು, ಥೊಂಡೇಬಾವಿ, ಹಾವೇರಿ, ಭಾಲ್ಕಿ, ಬೀದರ್, ಹುನಗುಂದ, ಯಲ್ಲಾಪುರ, ಗುತ್ತಲ್, ಹಳಿಯಾಳ, ಮುಂಡಗೋಡಿನಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ
ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




