Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆ
ಮಳೆ
Image Credit source: PTI

Updated on: Jul 16, 2025 | 7:23 AM

ಬೆಂಗಳೂರು, ಜುಲೈ 16: ಕರ್ನಾಟಕದ 14 ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮುಲ್ಕಿ, ಕ್ಯಾಸಲ್​ರಾಕ್, ಶಕ್ತಿನಗರ, ಬಂಟವಾಳ, ಕದ್ರಾ, ಕುಂದಾಪುರ, ಕೋಟಾ, ಮಂಕಿ, ಶಿರಾಲಿ,ಆಗುಂಬೆ, ಅಂಕೋಲಾ, ಸುಳ್ಯ, ಗೋಕರ್ಣ, ಮಾಣಿ, ಸಿದ್ದಾಪುರ ಲೋಂಡಾದಲ್ಲಿ ಭಾರಿ ಮಳೆಯಾಗಿದೆ. ಕಾರವಾರ, ಮೂಡುಬಿದಿರೆ, ಯಲ್ಲಾಪುರ, ಪುತ್ತೂರು, ಖಾನಾಪುರ, ಭಾಗಮಂಡಲ, ಕಮ್ಮರಡಿ, ಹೊನ್ನಾವರ, ಬನವಾಸಿ, ಜೋಯ್ಡಾ, ಧರ್ಮಸ್ಥಳ, ಜಯಪುರ, ನಾಪೋಕ್ಲು, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ನಿಪ್ಪಾಣಿ, ಕಿತ್ತೂರು, ಹುಂಚದಕಟ್ಟೆ, ಕೊಪ್ಪ, ಪೊನ್ನಂಪೇಟೆ, ಕಿರವತ್ತಿ, ಬೈಲಹೊಂಗಲ, ಧಾರವಾಡ, ಕಲಘಟಗಿ, ಶಿಗ್ಗಾಂವ್, ಸಂಕೇಶ್ವರ, ಧಾರವಾಡ, ಹುಬ್ಬಳ್ಳಿ, ಸೋಮವಾರಪೇಟೆ, ಕಳಸದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜು.21ರವರೆಗೂ ಭಾರಿ ಮಳೆ

ಬೆಳಗಾವಿ ಏರ್​ಪೋರ್ಟ್​​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:23 am, Wed, 16 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us