AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್​, ಆ.24ರವರೆಗೂ ಧಾರಾಕಾರ ಮಳೆ

ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಬೆಳಗಾವಿ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಮನಗರ, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳದಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್​, ಆ.24ರವರೆಗೂ ಧಾರಾಕಾರ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Aug 18, 2025 | 7:19 AM

Share

ಬೆಂಗಳೂರು, ಆಗಸ್ಟ್ 18: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆ(Rain)ಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಬೆಳಗಾವಿ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಮನಗರ, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳದಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಶೃಂಗೇರಿ, ಕಮ್ಮರಡಿ, ಜಯಪುರ, ಆಗುಂಬೆ, ಕೊಪ್ಪ, ಧರ್ಮಸ್ಥಳ, ಕಳಸ, ಸಿದ್ದಾಪುರ, ಬಾಳೆಹೊನ್ನೂರಿನಲ್ಲಿ ಭಾರಿ ಮಳೆಯಾಗಿದೆ. ಮಾಣಿ, ಕಾರ್ಕಳ, ಜೋಯ್ಡಾ, ಸುಳ್ಯ, ಪುತ್ತೂರು, ಮಂಕಿ, ಮಂಗಳೂರು, ಲೋಂಡಾ, ಕೊಟ್ಟಿಗೆಹಾರ, ಬೆಳ್ತಂಗಡಿ, ಬಂಟವಾಳ, ಸೋಮವಾರಪೇಟೆ, ಶಿರಾಲಿ, ನಾಪೋಕ್ಲು, ಕದ್ರಾ, ಭಾಗಮಂಡಲ, ಔರಾದ್, ಉಪ್ಪಿನಂಗಡಿ, ಎನ್​ಆರ್​ಪುರ, ಮೂಡುಬಿದಿರೆ, ಮಸ್ಕಿ, ತ್ಯಾಗರ್ತಿ, ಗೇರುಸೊಪ್ಪ, ಸೇಡಂನಲ್ಲಿ ಮಳೆಯಾಗಿದೆ.

ಮಸ್ಕಿ, ಖಾನಾಪುರ, ಹಳಿಯಾಳ, ಬನವಾಸಿ, ಯಲ್ಲಾಪುರ, ನಿಪ್ಪಾಣಿ, ಮುದ್ದೇಬಿಹಾಳ, ಮಂಗಳೂರು, ಕುಮಟಾ, ಕುಷ್ಟಗಿ, ಹುಮಚದಕಟ್ಟೆ, ಗುರುಮಿಟ್ಕಲ್, ಕಮಲಾಪುರ, ಗದಗ, ಧಾರವಾಡ, ಚಿಂಚೋಳಿ, ಬೆಂಗಳೂರು, ಆನವಟ್ಟಿ, ಅಜ್ಜಂಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಬಹುತೇಕ ಕಡೆ ಭಾನುವಾರ ಮಳೆಯಾಗಿದೆ, ಇಂದು ಕೂಡ ಮೋಡ ಕವಿದ ವಾತಾವರಣವಿದೆ. ಎಚ್​ಎಎಲ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 20.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು