Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ

ಇಂದಿನಿಂದ ಕರ್ನಾಟಕದ 14ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
Image Credit source: PTI
Edited By:

Updated on: Jul 17, 2025 | 11:13 AM

ಬೆಂಗಳೂರು, ಜುಲೈ 17: ಕರ್ನಾಟಕದಾದ್ಯಂತ ಇಂದಿನಿಂದ ವರುಣನ ಆರ್ಭಟ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆ (Monsoon Rain) ಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕೋಟಾ, ಬಂಟವಾಳ,ಕದ್ರಾ, ಪುತ್ತೂರು, ಉಡುಪಿ, ಶಕ್ತಿನಗರ, ಆಗುಂಬೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಾರ್ಕಳ, ಮೂಡುಬಿದಿರೆ, ಮಾಣಿ, ಶಿರಾಲಿ, ಸುಳ್ಯ, ಭಾಗಮಂಡಲ, ಶೃಂಗೇರಿ, ಜಯಪುರ, ಕೊಪ್ಪ, ಕಳಸ, ಜೋಯ್ಡಾ, ಬೆಳ್ತಂಗಡಿ, ಧರ್ಮಸ್ಥಳ, ಲೋಂಡಾ, ಅಂಕೋಲಾ, ಹೊನ್ನಾವರ, ಮಂಕಿ, ಬನವಾಸಿ, ಯಲ್ಲಾಪುರ, ಮುಂಡಗೋಡು, ತ್ಯಾಗರ್ತಿ, ಸೋಮವಾರಪೇಟೆ, ಖಾನಾಪುರ, ರಬಕವಿ, ಶಾಹಪುರ, ಸೈದಾಪುರ, ಹರಪನಹಳ್ಳಿ, ಎನ್​ಆರ್​ಪುರ, ಆನವಟ್ಟಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನ ಸಾಕಷ್ಟು ಕಡೆಗಳಲ್ಲಿ ಬುಧವಾರ ಮಳೆಯಾಗಿತ್ತು. ಎಚ್​​ಎಎಲ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು.17ರ ಬಳಿಕ ಮತ್ತಷ್ಟು ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್​

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 am, Thu, 17 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us