AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಜುಲೈ 13ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಜುಲೈ 13ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: NDTV
ನಯನಾ ರಾಜೀವ್
|

Updated on:Jul 09, 2023 | 8:01 AM

Share

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಗೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದ್ದು, ಕೊಡಗಿನಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊಲ್ಲೂರು, ಕುಮಟಾ, ಗೇರುಸೊಪ್ಪ, ಕ್ಯಾಸಲ್ ರಾಕ್, ಕೊಟ್ಟಿಗೆಹಾರ, ಹೊನ್ನಾವರ, ಶಿರಾಲಿ, ಗೋಕರ್ಣ, ಮಂಕಿ, ಬೆಳ್ತಂಗಡಿ, ಸುಬ್ರಹ್ಮಣ್ಯ, ಮಂಗಳೂರು, ಅಂಕೋಲಾ, ಭಾಗಮಂಡಲ, ಹುಂಚದಕಟ್ಟೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಉಪ್ಪಿನಂಗಡಿ, ಪುತ್ತೂರು, ಧರ್ಮಸ್ಥಳ, ಸುಳ್ಯ, ಕದ್ರಾ, ಕಮ್ಮರಡಿ, ಲಿಂಗನಮಕ್ಕಿ, ಲೋಂಡಾ, ಮಂಚಿಕೆರೆ,ಕಿರವತ್ತಿ, ಸಕಲೇಶಪುರ, ತಾಳಗುಪ್ಪ, ಕೋಟ, ಕಳಸ, ನಾಪೋಕ್ಲು, ಪುನ್ನಂಪೇಟೆ, ಯಲ್ಲಾಪುರ, ಹಳಿಯಾಳ, ಬನವಾಸಿ, ಕಾರವಾರ, ಕುಂದಾಪುರ, ಬೆಳಗಾವಿ, ಕೊಪ್ಪ, ಜಯಪುರ, ಶೃಂಗೇರಿ, ಬಾಳೆಹೊನ್ನೂರು, ಎನ್​ಆರ್ ಪುರ, ನಿಪ್ಪಾಣಿ, ಲಿಂಗಸುಗೂರು, ಗುತ್ತಲ್, ಹೊಸಕೋಟೆ, ಹರಪನಹಳ್ಳಿ, ಬೇಲೂರು, ಬಂಡೀಪುರ, ಸರಗೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು, ರೆಡ್ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಆಗಾಗ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನೈಋತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Sun, 9 July 23

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ