Karnataka Rains: ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬಿರುಗಾಳಿ, ಗಡುಗು ಸಹಿತ ಭಾರಿ ಮಳೆ

ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬಿರುಗಾಳಿ, ಗಡುಗು ಸಹಿತ ಭಾರಿ ಮಳೆ
ಮಳೆImage Credit source: India.com
Follow us
ನಯನಾ ರಾಜೀವ್
|

Updated on: Jun 11, 2023 | 8:00 AM

ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕೊಲ್ಲೂರು, ಕಾರ್ಕಳ, ಮಂಗಳೂರು, ಕೋಟ, ಶಿರಾಲಿ, ಉಡುಪಿ, ಅಂಕೋಲಾ, ಚಿಂಚೋಳಿ, ಕೊಟ್ಟಿಗೆಹಾರ, ಕುಂದಾಪುರ, ಬೇಲಿಕೇರಿ, ಕುಕನೂರು, ರೋಣ, ಗೋಕರ್ಣ, ಮುಧೋಳ, ಚಿಕ್ಕನಹಳ್ಳಿ, ಯುಗಟಿಯಲ್ಲಿ ಮಳೆಯಾಗಿದೆ.

ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಓದಿ: Karnataka Rain: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಧಿಕ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಎಫೆಕ್ಟ್‌ ರಾಜ್ಯದ 9 ಜಿಲ್ಲೆಗಳಿಗೆ ತಟ್ಟಲಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30-40 ಕಿಮೀ ತಲುಪಬಹುದು ಎಂದು ಎಚ್ಚರಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್