Karnataka Rains: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ

ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ
ಮಳೆ
Image Credit source: Hindustan Times

Updated on: Jun 30, 2023 | 7:22 AM

ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ, ಕ್ಯಾಸಲ್​ ರಾಕ್, ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರ, ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾ, ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು, ಸುಬ್ರಹ್ಮಣ್ಯ, ಮಾನಿ, ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳ, ಸಿದ್ದಾಪುರ,ಯಲ್ಲಾಪುರ, ಲೋಂಡಾ, ತಾಳಗುಪ್ಪ, ಲಿಂಗನಮಕ್ಕಿ, ಕೊಪ್ಪದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us