Karnataka Rains: ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಮುಂಗಾರು ಅಬ್ಬರ ಶುರುವಾಯ್ತಾ?

ಕರ್ನಾಟಕದಾದ್ಯಂತ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಮೇ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ಕ್ಯಾಸಲ್​ರಾಕ್,ಕೊಟ್ಟಿಗೆಹಾರ, ಭಾಗಮಂಡಲ, ಬೆಳ್ತಂಗಡಿ, ಮಂಕಿ, ಮಂಗಳೂರು, ಗೇರುಸೊಪ್ಪ, ಕುಂದಾಪುರ, ಮಾಣಿ, ಕುಮಟಾ, ಧರ್ಮಸ್ಥಳ, ಗೋಕರ್ಣ, ಕುಮಟಾ, ಕಳಸ, ಲೋಂಡಾ, ಶೃಂಗೇರಿ, ಯಲ್ಲಾಪುರ, ಹೊನ್ನಾವರ, ಸಿದ್ದಾಪುರ, ಪುತ್ತೂರು, ಮುಲ್ಕಿ, ಮಂಗಳೂರು, ಕಾರವಾರ, ಔರಾದ್, ಖಾನಾಪುರ, ಕೋಟಾ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ. ಕಮ್ಮರಡಿ, ತ್ಯಾಗರ್ತಿ, ಹಳಿಯಾಳ, ಆಗುಂಬೆ, ಕೊಪ್ಪ, ಚಿಕ್ಕಮಗಳೂರು, ಪೊನ್ನಂಪೇಟೆ, ಬೈಲಹೊಂಗಲ, ಬನವಾಸಿ, ಮಂಥಾಳ, ದೇವರಹಿಪ್ಪರಗಿ, ಧಾರವಾಡ, ಬಂಡೀಪುರ, ಬಸವನಬಾಗೇವಾಡಿ, ಎನ್​ಆರ್​ಪುರ, ಸರಗೂರು, ಹೊನ್ನಾಳಿ, ಕುಶಾಲನಗರದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಮುಂಗಾರು ಅಬ್ಬರ ಶುರುವಾಯ್ತಾ?
ಮಳೆ
Image Credit source: PTI

Updated on: May 25, 2025 | 7:30 AM

ಬೆಂಗಳೂರು, ಮೇ 25: ಕರ್ನಾಟಕದಾದ್ಯಂತ ಮಳೆ(Rain) ಚುರುಕುಗೊಳ್ಳಲಿದ್ದು, ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಕ್ಯಾಸಲ್​ರಾಕ್,ಕೊಟ್ಟಿಗೆಹಾರ, ಭಾಗಮಂಡಲ, ಬೆಳ್ತಂಗಡಿ, ಮಂಕಿ, ಮಂಗಳೂರು, ಗೇರುಸೊಪ್ಪ, ಕುಂದಾಪುರ, ಮಾಣಿ, ಕುಮಟಾ, ಧರ್ಮಸ್ಥಳ, ಗೋಕರ್ಣ, ಕುಮಟಾ, ಕಳಸ, ಲೋಂಡಾ, ಶೃಂಗೇರಿ, ಯಲ್ಲಾಪುರ, ಹೊನ್ನಾವರ, ಸಿದ್ದಾಪುರ, ಪುತ್ತೂರು, ಮುಲ್ಕಿ, ಮಂಗಳೂರು, ಕಾರವಾರ, ಔರಾದ್, ಖಾನಾಪುರ, ಕೋಟಾ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಇದನ್ನೂ ಓದಿ
ಕೇರಳಕ್ಕೆ ಮೇ 25ರೊಳಗೆ ಮುಂಗಾರು ಪ್ರವೇಶ; ಕರ್ನಾಟಕದಲ್ಲೂ ಬೇಗ ಮಳೆಗಾಲ ಶುರು
Bangalore Rains: ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಶುರುವಾದ ಮಳೆ
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಕಮ್ಮರಡಿ, ತ್ಯಾಗರ್ತಿ, ಹಳಿಯಾಳ, ಆಗುಂಬೆ, ಕೊಪ್ಪ, ಚಿಕ್ಕಮಗಳೂರು, ಪೊನ್ನಂಪೇಟೆ, ಬೈಲಹೊಂಗಲ, ಬನವಾಸಿ, ಮಂಥಾಳ, ದೇವರಹಿಪ್ಪರಗಿ, ಧಾರವಾಡ, ಬಂಡೀಪುರ, ಬಸವನಬಾಗೇವಾಡಿ, ಎನ್​ಆರ್​ಪುರ, ಸರಗೂರು, ಹೊನ್ನಾಳಿ, ಕುಶಾಲನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Monsoon 2025: ಕೇರಳಕ್ಕೆ ಮುಂಗಾರು ಪ್ರವೇಶ; 2009ರ ಬಳಿಕ ಮೊದಲ ಬಾರಿ ಬೇಗ ಮಳೆಗಾಲ ಶುರು

ರಾಯಚೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಕರ್ನಾಟಕ, ಗೋವಾ, ಕೇರಳ ಹಾಗೂ ತಮಿಳುನಾಡು ಕರಾವಳಿಗೆ ಮುಂಗಾರು ಏಕಕಾಲಕ್ಕೆ ಪ್ರವೇಶಿಸಿದೆ. ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

 

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us