Karnataka Rains: ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ; ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಆರೆಂಜರ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Karnataka Rains: ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ; ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
ಸಾಂಕೇತಿಕ ಚಿತ್ರ
Follow us
| Updated By: Rakesh Nayak Manchi

Updated on: Aug 05, 2022 | 6:00 AM

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಮತ್ತು ಶನಿವಾರ (ಆ.5 ಮತ್ತು ಆ.6) ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಆರೆಂಜರ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಸಮುದ್ರ ತೀರಗಳಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ. ಇರಲಿದೆ. ಇದು 65 ಕಿ.ಮೀ.ಗೂ ತಲುಪುವ ಸಾಧ್ಯತೆಯೂ ಇದೆ ಎಂದು ಸೂಚಿಸಿದ ಹವಾಮಾನ ಇಲಾಖೆ, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ.

ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಹೇಗಿರಲಿದೆ?

ದಕ್ಷಿಣ ಮತ್ತು ಪಶ್ಚಿಮ ಭಾರತ, ಹಿಮಾಲಯದ ತಪ್ಪಲಿನಲ್ಲಿ, ಡೆಕ್ಕನ್ ಪ್ರಸ್ಥಭೂಮಿ ಮತ್ತು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆಯಿದ್ದು, ಕೊಂಕಣ, ಗೋವಾ, ಉತ್ತರ ಒಳ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತೆಲಂಗಾಣ, ಕರ್ನಾಟಕ, ಕೇರಳ, ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯ ಮುನ್ಸೂಚನೆ ಇದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪೂರ್ವ ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಗುಜರಾತ್ ಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ, ಸೌರಾಷ್ಟ್ರ, ಕಚ್, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.