Karnataka Rains: ಕರ್ನಾಟಕದ 16 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಬಾದಾಮಿ, ಕುಷ್ಟಗಿ, ಮುದ್ದೇಬಿಹಾಳ, ನಾಗಮಂಗಲ, ಬೆಂಗಳೂರು ನಗರ, ಕಾರ್ಕಳ, ಬೀದರ್, ನರಗುಂದ, ಆಗುಂಬೆ, ಕುಣಿಗಲ್, ಟಿಜಿ ಹಳ್ಳಿ, ಹಳಿಯಾಳ, ಮಂಗಳೂರು, ಕಲಘಟಗಿ, ಸೇಡಂ, ಯಲಬುರ್ಗಾ, ತಿಪಟೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ. ಗಳೂರಿನಲ್ಲಿ ಗುರುವಾರ ಬೆಳಗ್ಗೆ ಮಳೆಯಿತ್ತು, ಅದಾದ ಬಳಿಕ ಬಿಸಿಲು ಕಾಣಿಸಿಕೊಂಡಿತ್ತು, ಸಂಜೆ ಶುಭ್ರ ಆಕಾಶವಿತ್ತು. ಆದರೆ ಇಂದು ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

Karnataka Rains: ಕರ್ನಾಟಕದ 16 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ
ಮಳೆ
Image Credit source: PTI

Updated on: Aug 08, 2025 | 7:22 AM

ಬೆಂಗಳೂರು, ಆಗಸ್ಟ್​ 08: ಕರ್ನಾಟಕದಾದ್ಯಂತ ಮಳೆ(Rain)ಯಾಗುತ್ತಿದ್ದು, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಬಾದಾಮಿ, ಕುಷ್ಟಗಿ, ಮುದ್ದೇಬಿಹಾಳ, ನಾಗಮಂಗಲ, ಬೆಂಗಳೂರು ನಗರ, ಕಾರ್ಕಳ, ಬೀದರ್, ನರಗುಂದ, ಆಗುಂಬೆ, ಕುಣಿಗಲ್, ಟಿಜಿ ಹಳ್ಳಿ, ಹಳಿಯಾಳ, ಮಂಗಳೂರು, ಕಲಘಟಗಿ, ಸೇಡಂ, ಯಲಬುರ್ಗಾ, ತಿಪಟೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಮಳೆಯಿತ್ತು, ಅದಾದ ಬಳಿಕ ಬಿಸಿಲು ಕಾಣಿಸಿಕೊಂಡಿತ್ತು, ಸಂಜೆ ಶುಭ್ರ ಆಕಾಶವಿತ್ತು. ಆದರೆ ಇಂದು ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

ಎಚ್​​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್​ಟ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್​ಪೋರ್ಟ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us