Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್​, ಅಬ್ಬರಿಸಲಿದೆ ವರ್ಷಧಾರೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರೆದಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್​, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು ಮಳೆ ವಿಪರೀತವಾಗಲಿದೆ. ಅಷ್ಟೇ ಅಲ್ಲದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆ ಸುರಿಯಲಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್​, ಅಬ್ಬರಿಸಲಿದೆ ವರ್ಷಧಾರೆ
ಮಳೆImage Credit source: Thomas Cook
Follow us
ನಯನಾ ರಾಜೀವ್
|

Updated on: Jul 17, 2024 | 7:33 AM

ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ, ಸಾಕಷ್ಟು ಕಡೆ ಭೂ ಕುಸಿತ ಸಂಭವಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು ಮಳೆ ಹೆಚ್ಚಲಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್​, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು ಮಳೆ ವಿಪರೀತವಾಗಲಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ.

ಗೋಕರ್ಣ, ಕುಂದಾಪುರ, ಮಂಕಿ, ಲಿಂಗನಮಕ್ಕಿ, ಸಿದ್ದಾಪುರ, ಹೊನ್ನಾವರ, ಕೊಲ್ಲೂರು, ಕೊಟ್ಟಿಗೆಹಾರ, ಭಾಗಮಂಡಲ, ಕೊಪ್ಪ, ಶೃಂಗೇರಿ, ಕುಮಟಾ, ಸಿದ್ದಾಪುರ, ಕ್ಯಾಸಲ್​ರಾಕ್, ಚಿಕ್ಕಮಗಳೂರು, ಕಮ್ಮರಡಿ, ಶಿರಾಲಿ, ಕದ್ರಾದಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ರೆಡ್​ ಅಲರ್ಟ್​, ಜುಲೈ 19ರವರೆಗೂ ಮಳೆ

ಹುಂಚದಕಟ್ಟೆ, ಕಳಸ, ಉಡುಪಿ, ಸೋಮವಾರಪೇಟೆ, ಕಾರ್ಕಳ, ತ್ಯಾಗರ್ತಿ, ಎನ್​ಆರ್​ಪುರ, ಮೂರ್ನಾಡು, ಬನವಾಸಿ, ಯಲ್ಲಾಪುರ, ಧರ್ಮಸ್ಥಳ, ಪುತ್ತೂರು, ಮೂಡಿಗೆರೆ, ಉಪ್ಪಿನಂಗಡಿ, ಸುಳ್ಯ, ಮಾಣಿ, ಇಳಕಲ್, ದೇವದುರ್ಗ, ನಾಪೊಕ್ಲುವಿನಲ್ಲಿ ಮಳೆಯಾಗಿದೆ.

ಬೆಳ್ತಂಗಡಿ, ಆನವಟ್ಟಿ, ಪೊನ್ನಂಪೇಟೆ, ಜೋಯಿಡಾ, ಪಣಂಬೂರು, ಗಬ್ಬೂರು, ವಿರಾಜಪೇಟೆ, ಬೇಲೂರು, ಹೊನ್ನಾಳಿ, ಭದ್ರಾವತಿ, ತರೀಕೆರೆ, ಕಿರವತ್ತಿ, ಹಾರಂಗಿ, ಮುಂಡಗೋಡು, ಸೇಡಂ, ಚಿಂಚೋಳಿ, ಇಂಡಿ, ಅರಕಲಗೂಡು, ಹಾಸನ, ಹೊಸದುರ್ಗ, ಚನ್ನಗಿರಿ, ಭಾಲ್ಕಿ, ಕಡೂರು, ರಾಣೆಬೆನ್ನೂರು, ಕಲಬುರಗಿ, ಕಮಲಾಪುರ, ಮುದಗಲ್, ಗುಂಡ್ಲುಪೇಟೆ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಮೋಡಮುಸುಕಿದ ವಾತಾವರಣವಿದ್ದು, ಎಚ್​ಎಎಲ್​ನಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ