AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಭಾನುವಾರದಿಂದ ಮಳೆ ಹೆಚ್ಚಳ; ಕರಾವಳಿಯಲ್ಲಿ ಹಳದಿ ಅಲರ್ಟ್

Weather Today: ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಲ್ಲಿ ಭಾನುವಾರದಿಂದ ಮಳೆ ಹೆಚ್ಚಳ; ಕರಾವಳಿಯಲ್ಲಿ ಹಳದಿ ಅಲರ್ಟ್
ಮಳೆImage Credit source: iStock
ಸುಷ್ಮಾ ಚಕ್ರೆ
|

Updated on: Oct 27, 2023 | 8:39 AM

Share

ಬೆಂಗಳೂರು: ಕರ್ನಾಟಕದಲ್ಲಿ (Karnataka Rains) ಕೆಲವು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ, ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ (Cyclone Hamoon) ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದಾದ್ಯಂತ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather: ಕರ್ನಾಟಕ ಹವಾಮಾನ ವರದಿ: ಚಳಿ ಶುರು, ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಭಾನುವಾರದಿಂದ ಮಳೆ ತೀವ್ರಗೊಳ್ಳಲಿದೆ. ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಅಕ್ಟೋಬರ್‌ 30ರವರೆಗೆ ಪಥನಾಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಅಲರ್ಟ್ ಮುಂದುವರಿಯಲಿದೆ. ಇಂದು ಪಥನಾಂತಿಟ್ಟ, ಆಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದ್ದು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ಮೈಲಾಡುತುರೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಪುದುಕ್ಕೊಟ್ಟೈನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ. ತಿರುಚಿರಾಪಳ್ಳಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಯಮತ್ತೂರು, ನೀಲಗಿರಿ, ಮೈಲಾಡುತುರೈ, ತಂಜಾವೂರು, ತಿರುವರೂರ್, ನಾಗಪಟ್ಟಣಂ, ಪುದುಕೊಟ್ಟೈ, ತಿರುಚಿರಾಪಳ್ಳಿ, ದಿಂಡಿಗಲ್, ಅರಿಯಲೂರ್, ಪೆರಂಬಲೂರು, ಸೇಲಂ, ನಾಮಕ್ಕಲ್, ವಿರುದುನಗರ, ತೂತುಕುಡಿ, ಮಧುರೈ ಮತ್ತು ಥೇಣಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೇ, ಇಂದು ತಮಿಳುನಾಡು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕೇರಳ, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್